ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರಧಾನಿ ಮೋದಿಯವರ ಜನ್ಮದಿನ ಪ್ರಯುಕ್ತ 15 ದಿನಗಳ ಕಾಲ ಜನರ ಆರೋಗ್ಯ ರಕ್ಷಣೆಯ ವಿಶೇಷ ಅಭಿಯಾನ 

Mahesh M Dhandu by Mahesh M Dhandu
September 16, 2022
in Newsbeat, State, ರಾಜ್ಯ
P M Narendra Modi

Minister dr k sudhakar We are blessed to have a Prime Minister like Modi

Share on FacebookShare on TwitterShare on WhatsappShare on Telegram

ಪ್ರಧಾನಿ ಮೋದಿಯವರ ಜನ್ಮದಿನ ಪ್ರಯುಕ್ತ 15 ದಿನಗಳ ಕಾಲ ಜನರ ಆರೋಗ್ಯ ರಕ್ಷಣೆಯ ವಿಶೇಷ ಅಭಿಯಾನ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ, ಸೆಪ್ಟೆಂಬರ್‌ 17 ರಿಂದ ಮಹಾತ್ಮ ಗಾಂಧಿ ಜಯಂತಿವರೆಗೆ (ಅಕ್ಟೋಬರ್‌ 2) ರಾಜ್ಯದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಸೇರಿದಂತೆ ವಿಶೇಷ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ. ಈ ಅಭಿಯಾನದ ರೂಪರೇಷೆ ಸಿದ್ಧಪಡಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ವಿವಿಧ ಆಸ್ಪತ್ರೆಗಳ ನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳೊಂದಿಗೆ ವೀಡಿಯೋ ಸಭೆ ನಡೆಸಿದರು.

Related posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026
ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

July 8, 2026

ಈ ಅಭಿಯಾನಕ್ಕೆ ಸೆಪ್ಟೆಂಬರ್‌ 17 ರಂದು ಬಿಎಂಸಿಆರ್‌ಐನಲ್ಲಿ (ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ) ಚಾಲನೆ ದೊರೆಯಲಿದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಇಲ್ಲ. ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ರಾಜ್ಯದಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಂದಾಗಿ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಆದ್ದರಿಂದ ಮಧುಮೇಹ, ಬಿಪಿ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ಎಷ್ಟು ಎಂಬುದನ್ನು ಪತ್ತೆ ಮಾಡಬೇಕಿದೆ. ಆರೋಗ್ಯ ಉಪಕೇಂದ್ರಗಳ ವ್ಯಾಪ್ತಿಯಲ್ಲಿ 15 ದಿನಗಳ ಕಾಲ ನಿರಂತರವಾಗಿ ಈ ಕಾರ್ಯ ನಡೆಯಬೇಕಿದೆ. ಆಶಾ ಕಾರ್ಯಕರ್ತೆಯರಿಗೆ ಈ ಬಗ್ಗೆ ತಿಳಿಸಿ, ಗುರಿ ನಿಗದಿ ಮಾಡಿ ಜನರನ್ನು ಉಪಕೇಂದ್ರಕ್ಕೆ ಕರೆದುಕೊಂಡು ಬರಲು ಸೂಚಿಸಬೇಕು. ರಾಜ್ಯದಲ್ಲಿ ಕೋವಿಡ್‌ ಮೂರನೇ ಡೋಸ್‌ ಪ್ರಮಾಣ ಶೇ.20 ರಷ್ಟು ಮಾತ್ರ ಆಗಿದೆ. ಈ ಹದಿನೈದು ದಿನಗಳಲ್ಲಿ ಲಸಿಕಾಕರಣವು ದೊಡ್ಡ ಮಟ್ಟದಲ್ಲಿ ನಡೆಯಲು ಕ್ರಮ ವಹಿಸಬೇಕು. ಎನ್‌ಜಿಒಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳನ್ನು ಆಹ್ವಾನಿಸಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಕರೆ ನೀಡಬೇಕು ಎಂದು ಸೂಚಿಸಿದರು.

Prime Minister Modi's birthday a 15-day special campaign for people's health care
Prime Minister Modi’s birthday a 15-day special campaign for people’s health care

ನವಜಾತ ಶಿಶುವಿನಿಂದ ಆರಂಭವಾಗಿ, ವಯೋವೃದ್ಧರವೆಗೂ ಸರ್ಕಾರ ನೀಡಿರುವ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಚಿಕಿತ್ಸೆ, ತಪಾಸಣೆಯ ಸೌಲಭ್ಯಗಳ ಬಗ್ಗೆ ಅನೇಕರಿಗೆ ಗೊತ್ತೇ ಇಲ್ಲ. ಅಂತಹವರಿಗೆ ಜಾಗೃತಿ ಮೂಡಿಸಿ ತಪಾಸಣೆ ಮಾಡಿಸಿಕೊಳ್ಳಲು ಹೇಳಬೇಕು. ರಾಜ್ಯದಲ್ಲಿ ಕ್ಯಾನ್ಸರ್‌ ತಪಾಸಣೆಯನ್ನು ಕೂಡ ಮಾಡಬೇಕು. ಜಿಲ್ಲಾ ಮಟ್ಟ ಅಥವಾ ತಾಲೂಕು ಮಟ್ಟದಲ್ಲಿ ತಪಾಸಣೆ ವ್ಯವಸ್ಥೆ ಮಾಡಿ, ಜನರೇ ಮುಂದೆ ಬಂದು ತಪಾಸಣೆ ಮಾಡಿಸಿಕೊಳ್ಳಲು ಅರಿವು ಮೂಡಿಸಬೇಕು. ಹಾಗೆಯೇ, 35 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ ಪುರುಷರನ್ನು ಕರೆದುಕೊಂಡು ಬಂದು ತಪಾಸಣೆ ಮಾಡಿಸಬೇಕು. ಐದು ವರ್ಷಕ್ಕೊಮ್ಮೆ ಇಂತಹ ಕಾರ್ಯಕ್ರಮ ನಡೆಯಬೇಕು. ಹೀಗೆ ತಪಾಸಣೆ ಮಾಡಿದರೆ ಸಾವುಗಳನ್ನು ತಪ್ಪಿಸಬಹುದು. ಜೊತೆಗೆ 8, 9, 10 ನೇ ವರ್ಷ ವಯಸ್ಸಿನ ಮಕ್ಕಳಿಗೆ ಕಣ್ಣಿನ ತಪಾಸಣೆ ಮಾಡಬೇಕು ಎಂದು ಸೂಚಿಸಿದರು.

ಸ್ಥಳೀಯ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರಿಗೆ ಹೇಳಿ ಜನರನ್ನು ಕರೆಸಿ ಅವರ ಆರೋಗ್ಯ ತಪಾಸಣೆ ಮಾಡಿಸಬಹುದು. ಹಾಗೆಯೇ ಎನ್‌ಜಿಒಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಜನರನ್ನು ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

Tags: #Saaksha TVPrime Minister Modispecial campaign
ShareTweetSendShare
Join us on:

Related Posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

by Shwetha
July 8, 2026
0

ಭಾರತೀಯ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ (ARAI) ಪ್ರಕಾರ, E10 ಪೆಟ್ರೋಲ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ವಾಹನಗಳಲ್ಲಿ E20 ಪೆಟ್ರೋಲ್ ಬಳಸಿದರೆ ರಬ್ಬರ್‌ನಿಂದ ತಯಾರಿಸಲಾದ ಕೆಲವು ಎಂಜಿನ್ ಮತ್ತು ಇಂಧನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram