ಚಂಡೀಗಢ: ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ಗೆ (Punjab) ಭೇಟಿ ನೀಡಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಉಂಟಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿಗೆ ದಿಗ್ಬಂಧನ ಎದುರಾಗಿದ್ದು, ಎಸ್ಪಿ ಶ್ರೇಣಿಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಗುರ್ಬಿಂದರ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ. ರಾಜ್ಯ ಪೊಲೀಸ್ ಮುಖ್ಯಸ್ಥರು ಸಿಂಗ್ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
2022 ರ ಜ.5 ರಂದು ಫಿರೋಜ್ ಪುರದಲ್ಲಿ ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ ಪ್ರಧಾನಿ ಮೋದಿ ಅವರ ಬೆಂಗಾವಲು ಸಿಬ್ಬಂದಿ ಫ್ಲೈ ಓವರ್ ನಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಆ ನಂತರ ಅವರು ಕಾರ್ಯಕ್ರಮಕ್ಕೆ ತೆರಳದೆ ಮರಳಿ ಹೋಗಿದ್ದರು. ಈಗ ಮತ್ತೊಂದು ಘಟನೆ ನಡೆದಿದೆ.