ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕುಮಾರಸ್ವಾಮಿಗೆ ಮತ್ತೊಂದು ಗಿಫ್ಟ್ ನೀಡಿದ ಪ್ರಧಾನಿ ನರೇಂದ್ರ ಮೋದಿ

ಕುಮಾರಣ್ಣಗೆ ಹೊಸ ಜವಾಬ್ದಾರಿ

Author2 by Author2
July 4, 2024
in National, Newsbeat, Saaksha Special, ಎಸ್ ಸ್ಪೆಷಲ್, ದೇಶ - ವಿದೇಶ, ನ್ಯೂಸ್ ಬೀಟ್, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ನವದೆಹಲಿ : ಕೇಂದ್ರ ಸಂಪುಟದಲ್ಲಿ ಉಕ್ಕು, ಭಾರೀ ಕೈಗಾರಿಕೆಯ ಸಚಿವರಾಗಿ ಕಾರ್ಯಭಾರ ಆರಂಭಿಸಿರುವ ಎಚ್.ಡಿ.ಕುಮಾರಸ್ವಾಮಿ, ಅಲ್ಪ ಕಾಲದಲ್ಲಿಯೇ ಪ್ರಧಾನಿ ಮನ ಗೆಲ್ಲಲು ಯಶಸ್ವಿಯಾದಂತಿದೆ. ಏಕೆಂದರೆ, ಪ್ರಧಾನಿ ಎಲ್ಲ ಸಚಿವರಿಗಿಂತ ಕುಮಾರಣ್ಣನ ಮೇಲೆ ಹೆಚ್ಚು ಒಲವು ತೋರುತ್ತಿದ್ದಾರೆ.

ಈಗ ಪ್ರಧಾನಿ ಮೋದಿ ಅವರು ಅವರು ಕುಮಾರಸ್ವಾಮಿಗೆ ಈಗಿರುವ ಜವಾಬ್ದಾರಿಯೊಂದಿಗೆ ಮತ್ತೊಂದು ಕಾರ್ಯಾಭಾರವನ್ನು ಹೆಗಲಿಗೆ ಹಾಕಿದ್ದಾರೆ. ಹಣಕಾಸು ವಿಚಾರದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಮಿತಿಗೆ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಎರಡು ಸ್ಥಾನ ಗೆದ್ದಿದ್ದರೂ ಮೋದಿ ಮತ್ತು ಅಮಿತ್ ಶಾ ಅವರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿರುವ ಕುಮಾರಸ್ವಾಮಿ ಸಂಪುಟ ಆರ್ಥಿಕ ವ್ಯವಹಾರಗಳ ಸಮಿತಿಯಲ್ಲಿ ( Cabinet Committee on Economic Affairs ) ಸದಸ್ಯರಾಗಿ ಸೇರ್ಪಡೆಯಾಗಿದ್ದಾರೆ. ಈ ಸಮಿತಿಯಲ್ಲಿ ಕೆಲವೇ ಕೆಲವು ಹಿರಿಯ ಸಚಿವರಿದ್ದು, ಅವರ ಪೈಕಿ ಕುಮಾರಣ್ಣ ಕೂಡ ಇರುವುದು ವಿಶೇಷ. ಇದು ಕನ್ನಡಿಗರಿಗೆ ಸಂತಸ ನೀಡುವ ಸುದ್ದಿಯಾಗಿದೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಈ ಸಮಿತಿಯಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಡಾ. ಜೈಶಂಕರ್, ವಾಣಿಜ್ಯ ಸಚಿವ ಪಿಯೂಶ್ ಗೋಯಲ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪಂಚಾಯತ್ ರಾಜ್ ಸಚಿವ ಲಲ್ಲನ್ ಸಿಂಗ್ ಇದ್ದಾರೆ.

ದೇಶದ ಆರ್ಥಿಕ ವಿಚಾರದಲ್ಲಿ ಅತ್ಯಂತ ಮಹತ್ವದ ನಿರ್ಣಯ ತೆಗೆದುಕೊಳ್ಳುವ ಈ ಸಮಿತಿಯ ಹನ್ನೊಂದು ಸದಸ್ಯರಲ್ಲಿ ಬಿಜೆಪಿ ಹೊರತಾಗಿ ಇರುವ ಸದಸ್ಯರೆಂದರೆ ಜೆಡಿಎಸ್ ನಿಂದ ಕುಮಾರಸ್ವಾಮಿ ಹಾಗೂ ಜೆಡಿಯು ನಿಂದ ಲಲ್ಲನ್ ಸಿಂಗ್ ಮಾತ್ರ. ಇದು ಕುಮಾರಣ್ಣಂಗೆ ಮತ್ತಷ್ಟು ಗರಿ ನೀಡಿದಂತಾಗಿದೆ.
ಕೇಂದ್ರ ಸರ್ಕಾರ ಎಂಟು ಸಮಿತಿಗಳನ್ನು ರಚಿಸಿದ್ದು , ಬಹುತೇಕ ಎಲ್ಲಾ ಕಮಿಟಿಗೂ ಪ್ರಧಾನಿ ಮೋದಿಯವರೇ ಅಧ್ಯಕ್ಷರು. ರಾಜ್ಯದಿಂದ ಪ್ರಲ್ಹಾದ ಜೋಶಿ ಮತ್ತು ಕುಮಾರಸ್ವಾಮಿ ಈ ಎಂಟು ಸಮಿತಿಗಳಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಬಿಜೆಪಿಯ ಪ್ರಹ್ಲಾದ್ ಜೋಶಿಗಿಂತಲೂ ಕುಮಾರಣ್ಣ ಸಂಪುಟದಲ್ಲಿ ಹೆಚ್ಚು ಜವಾಬ್ದಾರಿಗಳನ್ನು ಹೊತ್ತಿರುವುದು ಅವರ ಆತ್ಮಸ್ಥೈರ್ಯಕ್ಕೆ ಬಲ ನೀಡಿದಂತಾಗಿದೆ.

ಸಂಪುಟ ಬಂಡವಾಳ ಮತ್ತು ಪ್ರಗತಿ ಸಮಿತಿಯಲ್ಲಿ ಪ್ರಲ್ಹಾದ ಜೋಶಿ ಸ್ಥಾನ ಪಡೆದಿದ್ದಾರೆ. ಸಂಪುಟ ನೇಮಕಾತಿ ಸಮಿತಿಯಲ್ಲಿ ಮೋದಿ ಮತ್ತು ಅಮಿತ್ ಶಾ ಇಬ್ಬರೇ ಸದಸ್ಯರಿದ್ದಾರೆ. ಆರ್ಥಿಕ ವ್ಯವಹಾರಗಳ ಸಮಿತಿಯಲ್ಲಿ ಕುಮಾರಸ್ವಾಮಿ ಸದಸ್ಯರಾಗಿರುವುದು ಅವರ ರಾಜಕೀಯ ಜೀವನದ ಬದಲಾದ ಸನ್ನಿವೇಶದ ಪ್ರಮುಖ ಹುದ್ದೆಗಳಲ್ಲೊಂದು ಎಂದೇ ಬಿಂಬಿಸಬಹುದು.

ಜೆಡಿಎಸ್, ಜೆಡಿಯು ಪಕ್ಷದಂತೆಯೇ, ತೆಲುಗುದೇಶಂ ಆರ್ ಎಲ್ ಡಿ, ಎಚ್ಎಎಂ ಪಕ್ಷದ ಸಂಸದರನ್ನೂ ಸಮಿತಿಯ ಸದಸ್ಯರನ್ನಾಗಿ ಮಾಡುವ ಮೂಲಕ, ಮೈತ್ರಿಕೂಟದಲ್ಲಿ ಸಮತೋಲನ ಕಾಪಾಡಿಕೊಳ್ಳಲಾಗಿದೆ. ಆರ್ಥಿಕ ವ್ಯವಹಾರ ಸಮಿತಿಯಲ್ಲಿ ಕುಮಾರಸ್ವಾಮಿ, ಲಲ್ಲನ್ ಸಿಂಗ್ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಹೊಸದಾಗಿ ಸೇರಿದ್ದಾರೆ.

Tags: Prime Minister Narendra Modi gave another gift to Kumaraswamy
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram