Narendra Modi | ಮಂಗಳೂರಿನಲ್ಲಿ ಮೋದಿ : ವಿವಿಧ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಕಡಲ ನಗರಿ ಮಂಗಳೂರಿನಲ್ಲಿ ಎನ್ಎಂಪಿಎ ಮತ್ತು ಎಮ್ಆರ್ಪಿಎಲ್ಗೆ ಸೇರಿದ 3,800 ಕೋಟಿ ರೂ. ಮೊತ್ತದ ಎಂಟು ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ ನೆರವೇರಿಸಿದ್ದಾರೆ.
ಕೊಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮದಲ್ಲಿ ನಡೆಯುತ್ತಿದೆ.
ಪ್ರಧಾನಿ ಲೋಕಾರ್ಪಣೆ ಮಾಡಿದ ಯೋಜನೆಗಳು ಹೀಗಿವೆ
ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ (ರೂ.281 ಕೋಟಿ)
ಬಿಎಸ್ VI ಉನ್ನತೀಕರಣ ಯೋಜನೆ (ರೂ.1829 ಕೋಟಿ), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (ರೂ.677 ಕೋಟಿ)
ಶಿಲಾನ್ಯಾಸ ಮಾಡಿದ ಯೋಜನೆಗಳು ಹೀಗಿವೆ
ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ (ಅಂದಾಜು ವೆಚ್ಚ ರೂ.500 ಕೋಟಿ)
ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ (ರೂ.100 ಕೋಟಿ)
ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ (ರೂ.100 ಕೋಟಿ)
ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ.100ಕೋಟಿ).
ವೇದಿಕೆ ಕಾರ್ಯಕ್ರಮದ ಬಳಿಕ ಪ್ರಧಾನಿ ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆಯನ್ನು ಮಾಡಲಿದ್ದಾರೆ.
ಇನ್ನು ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸರ್ಬಾನಂದ್ ಸೋನೊವಾಲ್, ಹರ್ದೀಪ್ ಸಿಂಗ್ ಪುರಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದಾರೆ.