ಸೈರಸ್ ಮಿಸ್ತ್ರಿ ನಿಧನ ಉದ್ಯಮ ಲೋಕಕ್ಕೆ ದೊಡ್ಡ ನಷ್ಟ – ಪ್ರಧಾನಿ ನರೇಂದ್ರ ಮೋದಿ…
ಉದ್ಯಮಿ ಸೈರಸ್ ಮಿಸ್ತ್ರಿ ಅವರ ಅಕಾಲಿಕ ಮರಣ ಆಘಾತಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಮಿಸ್ತ್ರಿ ಅವರು ಭಾನುವಾರ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
“ಅವರು ಭಾರತದ ಆರ್ಥಿಕ ಪರಾಕ್ರಮದಲ್ಲಿ ನಂಬಿಕೆಯಿಡುವ ಭರವಸೆಯ ಬಿಸಿನೆಸ್ ನಾಯಕರಾಗಿದ್ದರು. ಅವರ ನಿಧನದಿಂದ ವಾಣಿಜ್ಯ ಮತ್ತು ಉದ್ಯಮ ಲೋಕಕ್ಕೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸೈರಸ್ ಮಿಸ್ತ್ರಿ ಸಾವಿನ ಸುದ್ದಿ ತಿಳಿದ ಕೂಡಲೇ ಮೋದಿ ಟ್ವೀಟ್ ಮಾಡಿದ್ದಾರೆ.
54 ವರ್ಷದ ಮಿಸ್ತ್ರಿ ಅವರು ಅಹಮದಾಬಾದ್‌ನಿಂದ ಮುಂಬೈಗೆ ಮರ್ಸಿಡಿಸ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಮಧ್ಯಾಹ್ನ 3.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸೂರ್ಯ ನದಿಯ ಸೇತುವೆಯ ಮೇಲೆ ಆಕಸ್ಮಿಕವಾಗಿ ದುರ್ಘಟನೆ ಸಂಭವಿಸಿದೆ ಎಂದು ಪಾಲ್ಘರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಪಾಟೀಲ್ ಹೇಳಿದ್ದಾರೆ.