ನವದೆಹಲಿ : ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮದಿನಾಚರಣೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ ಘಾಟ್ ಗೆ ತೆರಳಿ ಗಾಂಧಿ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ್ದಾರೆ.
ರಾಷ್ಟ್ರಪಿತ ಗಾಂಧೀಜಿ ಅವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿಗಳು ಟ್ವೀಟ್ ಮಾಡಿದ್ದು, ‘ಮಹಾತ್ಮ ಗಾಂಧೀಜಿಯವರ ಜೀವನ ಮತ್ತು ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ.
ಸಮೃದ್ಧ ಮತ್ತು ಸಹಾನುಭೂತಿಯುಳ್ಳ ಭಾರತವನ್ನು ರಚಿಸಲು ಬಾಪು ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ ಎಂದು ಗಾಂಧಿ ಕುರಿತಾದ 2 ನಿಮಿಷಗಳ ವಿಡಿಯೋವನ್ನು ಟ್ಯಾಗ್ ಮಾಡಿದ್ದಾರೆ.
We bow to beloved Bapu on Gandhi Jayanti.
There is much to learn from his life and noble thoughts.
May Bapu’s ideals keep guiding us in creating a prosperous and compassionate India. pic.twitter.com/wCe4DkU9aI
— Narendra Modi (@narendramodi) October 2, 2020
ಇನ್ನು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 116ನೇ ಜನ್ಮದಿನಾಚರಣೆ ಹಿನ್ನೆಲೆ ವಿಜಯ್ ಘಾಟ್ ಗೆ ಹೋಗಿ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು.
ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರು ಸ್ಥಿರ ಮತ್ತು ಅತ್ಯಂತ ದೃಢ ನಿಲುವಿನ ವ್ಯಕ್ತಿಯಾಗಿದ್ದರು. ಸರಳತೆಯನ್ನು ನಿರೂಪಿಸಿದ್ದರು. ಅಲ್ಲದೇ ರಾಷ್ಟ್ರದ ಕಲ್ಯಾಣಕ್ಕಾಗಿ ಬದುಕಿದ್ದರು.
ಅಷ್ಟೇ ಅಲ್ಲದೇ ಅವರು ಭಾರತಕ್ಕಾಗಿ ಮಾಡಿದ ಎಲ್ಲದಕ್ಕೂ ಆಳವಾದ ಕೃತಜ್ಞತೆಗಳೊಂದಿಗೆ ಅವರ ಜಯಂತಿಯಲ್ಲಿ ನಾವು ಅವರನ್ನು ನೆನಪಿಸಿಕೊಳ್ಳುತ್ತೇವೆ ಎಂದು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಗೆ ಶುಭಾಶಯ ಕೋರಿದ್ದಾರೆ.
ಇದನ್ನೂ ಓದಿ : ಹಬ್ಬದ ಹಿನ್ನೆಲೆ – ಅಕ್ಟೋಬರ್ 15 ರಿಂದ ನವೆಂಬರ್ 30 ರವರೆಗೆ 200 ವಿಶೇಷ ರೈಲು
Lal Bahadur Shastri Ji was humble and firm.
He epitomised simplicity and lived for the welfare of our nation.
We remember him on his Jayanti with a deep sense of gratitude for everything he has done for India. pic.twitter.com/bTV6886crz
— Narendra Modi (@narendramodi) October 2, 2020