ದೆಹಲಿಯಲ್ಲಿ ಇಂದು ಧ್ವಜಾರೋಹಣದ ಬಳಿಕ ಭಾಷಣ ಮಾಡಿದ ಪ್ರದಾನಿ ನರೇಂದ್ರ ಮೋದಿ ಅವರು ಕೆಲ ಮಹತ್ವದ ವಿಚಾರಗಳ ಬಗ್ಗೆ ಪ್ರಸ್ತಾವನೆ ಮಾಡಿದ್ದಾರೆ. ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ ರಚಿಸಿದ್ದು, ಸಮಿತಿ ವರದಿ ಸಲ್ಲಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.
ಇದೇ ವೇಳೆ ಮಹಿಳೆಯರಿಗೆ ಅವಕಾಶ ಸಿಕ್ಕಾಗಲೆಲ್ಲಾ ಭಾರತ ಹೆಮ್ಮೆ ಪಡುವಂತೆ ಮಾಡುತ್ತಿದ್ದಾರೆ. ಈ ಮೂಲಕ ಭಾರತವನ್ನು ಬಲಪಡಿಸುವ ಕೆಲಸ ಮಾಡುತ್ತಿದ್ದಾರೆ. ಇಂದು, ದೇಶವು ಅವರಿಗೆ ಸ್ವಯಂ ಉದ್ಯೋಗ ಮತ್ತು ಉದ್ಯೋಗದ ಸಮಾನ ಅವಕಾಶಗಳನ್ನು ನೀಡುತ್ತಿದೆ. ದೇಶದಲ್ಲಿ ಇಂದು ಮಹಿಳೆಯರು ಕಲ್ಲಿದ್ದಲು ಗಣಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ದೇಶದ ಮಹಿಳೆಯರು, ಮಕ್ಕಳ ಮೇಲೆ ನನಗೆ ಪೂರ್ಣ ನಂಬಿಕೆಯಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.









