ಬಸವ ಜಯಂತಿಯಂದು ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಕೋರಿದ ಪ್ರಧಾನಿ ಮೋದಿ
ಇಂದು ಬಸವ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಗಜ್ಯೋತಿ ಬಸವೇಶ್ವರರಿಗೆ ಗೌರವ ನಮನ ಸಲ್ಲಿಸಿದರು. ಕನ್ನಡದಲ್ಲೇ ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, 2020ರಲ್ಲಿ ಜಗದ್ಗುರು ಬಸವೇಶ್ವರರ ಕುರಿತು ಮಾತನಾಡಿರುವ ತಮ್ಮ ಭಾಷಣದ ವೀಡೀಯೋ ತುಣುಕನ್ನ ಹಂಚಿಕೊಂಡಿದ್ದಾರೆ.
ಬಸವ ಜಯಂತಿಯ ಈ ಶುಭ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗೂ ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ. ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ನಾನು ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿರುವೆ.https://t.co/RMDe2bTiMD
— Narendra Modi (@narendramodi) May 3, 2022
ಇನ್ನು ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವರು ಬಸವ ಜಯಂತಿ ಪ್ರಯುಕ್ತ ಬಸವೇಶ್ವರರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.
ಬಸವ ಜಯಂತಿಯಂದು ಮಹಾನ್ ಚಿಂತಕ, ಜಗದ್ಗುರು ಶ್ರೀ ಬಸವೇಶ್ವರರಿಗೆ ನಮನಗಳು. ಅವರು ತಮ್ಮ ಸಂಪೂರ್ಣ ಜೀವನವನ್ನು ಮಾನವತೆಯ ಸೇವೆಯಲ್ಲಿ, ಬಡವರು ಮತ್ತು ದುರ್ಬಲರ ಸಬಲೀಕರಣಕ್ಕಾಗಿ ಮೀಸಲಿಟ್ಟರು. ಸೌಹಾರ್ದತೆ, ಸಹೋದರತೆ ಮತ್ತು ಸಹಾನುಭೂತಿಯನ್ನು ಸಮಾಜದಲ್ಲಿ ಪಸರಿಸಬೇಕೆಂಬ ಅವರ ಶ್ರೇಷ್ಠ ಬೋಧನೆಗಳು ನಮಗೆ ಸದಾ ಮಾರ್ಗದರ್ಶನವನ್ನು ನೀಡುತ್ತಿರುತ್ತದೆ ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.








