ವಿಶ್ವದಲ್ಲಿಯೇ DNA ಲಸಿಕೆ ಅಭಿವೃದ್ಧಿ ಪಡಿಸಿದ ಮೊದಲ ರಾಷ್ಟ್ರ ಭಾರತ – ಮೋದಿ
ವಿಶ್ವಾದ್ಯಂತ ಕೊರೊನಾ ವೈರಸ್ , ರೂಪಾಂತರ ತಳಿಗಳ ಹಾವಳಿಯ ನಡುವೆ ಕೊರೊನಾ ಲಸಿಕೆ ಅಭಿಯಾನವೂ ಹೆಚ್ಚಾಗಿದೆ.. ಈ ನಡುವೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವದಲ್ಲೇ DNA ಲಸಿಕೆ ಅಭಿವೃದ್ಧಿ ಪಡಿಸಿದ ಮೊದಲ ರಾಷ್ಟ್ರ ಭಾರತ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.
ಹೌದು 12 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ನೀಡಲು ಯೋಜಿಸಿರುವ DNA ಲಸಿಕೆಯನ್ನ ಅಭಿವೃದ್ಧಿ ಪಡಿಸಿರುವ ಮೊದಲ ದೇಶ ಎಂದು ಪ್ರಧಾನಿ ಮೋದಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ತಿಳಿಸಿದ್ದಾರೆ. ಅಲ್ಲದೇ ಸೇವಾ ಪರಮೋ ಧರ್ಮ ಎಂಬ ತತ್ವವನ್ನು ಭಾರತ ಜೀವಿಸುತ್ತಿದ್ದು, ಸೀಮಿತ ಸಂಪನ್ಮೂಲಗಳ ನಡುವೆಯೂ ಲಸಿಕೆ ಅಭಿವೃದ್ಧಿ ಹಾಗೂ ಉತ್ಪಾದನೆಯನ್ನು ಮಾಡಿದೆ. ಭಾರತ ವಿಶ್ವದ ಮೊದಲ ಡಿಎನ್ಎ ಲಸಿಕೆಯನ್ನು ತಯಾರಿಸಿದೆ ಎಂದು ಯುಎನ್ಜಿಎಗೆ ಹೇಳುತ್ತಿದ್ದೇನೆ ಎಂದಿದ್ದಾರೆ.
ಬಿಜೆಪಿ ಸರ್ಕಾರ ತಾಲಿಬಾನ್ ಸರ್ಕಾರ, ದೇಶ ಮುನ್ನಡೆಸೋದಕ್ಕೆ ಬರಲ್ಲ : ದೀದಿ
ಇದೇ ವೇಳೆ ಕಳೆದ ತಿಂಗಳು ಭಾರತದ ಔಷಧ ನಿಯಂತ್ರಕ ಝೈಡಸ್ ಕ್ಯಾಡಿಲಾಗೆ ತುರ್ತು ಬಳಕೆಗೆ ಅನುಮೋದನೆ ನೀಡಿತ್ತು. ಇದನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, ಇದು 12 ವರ್ಷ ಹಾಗೂ ಮೇಲ್ಪಟ್ಟವರಿಗೆ ನೀಡಬಹುದಾಗಿರುವ ಸೂಜಿ ರಹಿತ ಕೋವಿಡ್ -19 ಲಸಿಕೆಯಾಗಿದೆ. ಫೈಝುರ್ ಲಸಿಕೆ ಕೊನೆಯ ಹಂತದ ಅಭಿವೃದ್ಧಿಯಲ್ಲಿದ್ದು, ಕೊರೊನಾಗೆ ಮೂಗಿನ ಲಸಿಕೆ ಅಭಿವೃದ್ಧಿಪಡಿಸುವುದಕ್ಕೂ ಭಾರತದಲ್ಲಿ ವಿಜ್ಞಾನಿಗಳು ತೊಡಗಿದ್ದಾರೆ. ಮನುಕುಲದೆಡೆಗೆ ಭಾರತ ತನ್ನ ಜವಾಬ್ದಾರಿಯನ್ನು ಅರಿತು ಭಾರತ ವಿಶ್ವದಲ್ಲಿ ಅಗತ್ಯವಿರುವವರಿಗೆ ನೀಡಲು ಮುಂದಾಗಿದೆ. ಭಾರತದಲ್ಲಿ ಲಸಿಕೆಯನ್ನು ಉತ್ಪಾದಿಸಲು ಜಗತ್ತಿನ ಲಸಿಕೆ ತಯಾರಕರಿಗೆ ನಾನು ಕರೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.