ಪ್ರಧಾನಿ ಭೇಟಿ ಹಿನ್ನೆಲೆ- ಸ್ಥಳ ಪರಿಶೀಲನೆ ನಡೆಸಿದ ವಸತಿ ಸಚಿವ ವಿ.ಸೋಮಣ್ಣ

1 min read
Narendra modi saaksha tv

ಪ್ರಧಾನಿ ಭೇಟಿ ಹಿನ್ನೆಲೆ- ಸ್ಥಳ ಪರಿಶೀಲನೆ ನಡೆಸಿದ ವಸತಿ ಸಚಿವ ವಿ.ಸೋಮಣ್ಣ Narendra modi saaksha tv

ಬೆಂಗಳೂರು: ಗೋವಿಂದರಾಜನಗರದ ನಾಗರಭಾವಿಯಲ್ಲಿರುವ ಜ್ಞಾನಭಾರತಿ ಆವರಣದಲ್ಲಿ ನಿರ್ಮಿಸಲಾಗಿರುವ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನ ನೂತನ ಕ್ಯಾಂಪಸ್ ಉದ್ಘಾಟನೆಗೆ ಇದೇ ಡಿಸೆಂಬರ್ 6ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.

ಈ ಕುರಿತಂತೆ ವಸತಿ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವರಾದ ವಿ ಸೋಮಣ್ಣ ಅವರು ಸ್ಥಳ ಪರಿಶೀಲನೆ ನಡೆಸಿದರು.

ಪ್ರಧಾನಿ ಭೇಟಿಗೆ ಹಿನ್ನೆಲೆಯಲ್ಲಿ ಸೂಕ್ತ ತಯಾರಿಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ ಸಚಿವರು, ಈ ಕೂಡಲೇ ಸಿದ್ಧತೆಗಳನ್ನು ಆರಂಭಿಸಬೇಕು ಎಂದು ಸೂಚಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸುಮಾರು 43 ಎಕರೆ ಪ್ರದೇಶದಲ್ಲಿ ಹರಡಿರುವ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಹೆಸರಿನ ಈ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಜಾಗತಿಕ‌ ಮಟ್ಟದ ಸೌಲಭ್ಯಗಳು ಲಭ್ಯವಿವೆ.

Narendra modi saaksha tv

ಹವಾನಿಯಂತ್ರಿತ ಸ್ಮಾರ್ಟ್ ತರಗತಿಗಳು, ಹೊರಾಂಗಣ ಹಾಗೂ ಒಳಾಂಗಣ ಸಭಾಂಗಣ, ಕಲಿಕಾ ಸಂಪನ್ಮೂಲ ಕೇಂದ್ರ ಇಲ್ಲಿ ಲಭ್ಯವಿವೆ.

ಶಿಕ್ಷಣ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮವನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ಮುನಿರತ್ನ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಬಿಬಿಎಂಪಿ ಪಶ್ಚಿಮ ವಿಭಾಗದ ಆಯುಕ್ತ ದೀಪಕ್ ಅವರು ಸೇರಿ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd