Narendra Modi | ಕೇದಾರನಾಥ್, ಬದರೀನಾಥ್ ಗೆ ಪ್ರಧಾನಿ ಭೇಟಿ
ಉತ್ತರಾಖಂಡ್ : ಪ್ರಧಾನಿ ನರೇಂದ್ರ ಮೋದಿ ಇಂದು ಕೇದಾರನಾಥ್ ಹಾಗೂ ಬದರೀನಾಥ್ ಗೆ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಸರ್ವಋತುಗಳಿಗೂ ಅನುಕೂಲವಾಗುವ ಒಟ್ಟಾರೆ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಗಡಿ ರಸ್ತೆ ಸಂಪರ್ಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಇದಕ್ಕೂ ಮುನ್ನ, ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಅಲ್ಲಿನ ಶ್ರಮಿಕರೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

ಇದೇ ವೇಳೆ ಗೌರಿಕುಂಡ್‌ನಿಂದ ಕೇದಾರನಾಥ ಮತ್ತು ಗೋವಿಂದಘಾಟ್‌ನಿಂದ ಹೇಮಕುಂಡ್ ಸಾಹಿಬ್ ವರೆಗೆ ಸಂಪರ್ಕ ಕಲ್ಪಿಸುವ 3 ಸಾವಿರದ 400 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ವಿವಿಧ ಸಂಪರ್ಕ ಯೋಜನೆ ಸೇರಿ ಎರಡು ನೂತನ ರೋಪ್‌ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ.








