ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್ಸೈಟ್ ಮತ್ತು ಮೊಬೈಲ್ ಆ್ಯಪ್ನ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮ ದೈತ್ಯ ಟ್ವಿಟ್ಟರ್ ಖಚಿತಪಡಿಸಿದೆ. ಖಾತೆಯನ್ನು ಸೆಕ್ಯೂರ್ ಮಾಡಲು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಟ್ವಿಟರ್ ಹೇಳಿದೆ.
ಹ್ಯಾಕರ್ಸ್ ಅದರ ಟ್ವಿಟರ್ ಅಕೌಂಟ್ ಮೂಲಕ ಫಾಲೋಯರ್ಸ್ ಬಳಿ ರಿಲೀಫ್ ಫಂಡ್ಗೆ ಕ್ರಿಪ್ಟೋಕರೆನ್ಸಿ ಮೂಲಕ ದೇಣಿಗೆ ನೀಡಿ ಎಂಬ ಸರಣಿ ಟ್ವೀಟ್ ಮಾಡಿದ್ದಾರೆ.
@narendramodi_in ಖಾತೆಯು 61 ದಶಲಕ್ಷಕ್ಕೂ ಹೆಚ್ಚು ಫಾಲೊವರ್ಸ್ ಹೊಂದಿದೆ.
ನಾವು ಈ ಖಾತೆಯ ಮಾಹಿತಿ ಸಂಗ್ರಹಿಸಿ ಭದ್ರಪಡಿಸಿಕೊಳ್ಳಲು ಕ್ರಮಗಳನ್ನು ಕೈಗೊಂಡಿದ್ದೇವೆ. ನಾವು ಪರಿಸ್ಥಿತಿಯನ್ನು ಸಕ್ರಿಯವಾಗಿ ಪರಿಶೀಲಿಸುತ್ತಿದ್ದೇವೆ. ಈ ಸಮಯದಲ್ಲಿ, ಹೊಸದಾಗಿ ಯಾವುದೇ ಟ್ವಿಟರ್ ಖಾತೆಗಳು ಹ್ಯಾಕ್ ಆಗಿಲ್ಲ ಎಂದು ಟ್ವಿಟರ್ ಹೇಳಿಕೆಯಲ್ಲಿ ತಿಳಿಸಿದೆ.
ಜುಲೈನಲ್ಲಿ ಪ್ರಮುಖ ವ್ಯಕ್ತಿಗಳ ಹಲವಾರು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡಿದ ನಂತರ ಈ ಘಟನೆ ಸಂಭವಿಸಿದೆ.
ಯುಎಸ್ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡನ್, ಮಾಜಿ ಯುಎಸ್ ಅಧ್ಯಕ್ಷ ಬರಾಕ್ ಒಬಾಮ ಮತ್ತು ಬಿಲಿಯನೇರ್ ಎಲೋನ್ ಮಸ್ಕ್ ಸೇರಿದಂತೆ ಇತರ ಕೆಲವು ಉನ್ನತ ವ್ಯಕ್ತಿಗಳ ಖಾತೆಯನ್ನು ಹ್ಯಾಕರ್ಸ್ ಜುಲೈನಲ್ಲಿ ಟ್ವಿಟ್ಟರ್ನ ಮೂಲಕ ಹ್ಯಾಕ್ ಮಾಡಿದ್ದರು ಮತ್ತು ಡಿಜಿಟಲ್ ಕರೆನ್ಸಿಯ ಬಗ್ಗೆ ಮಾಹಿತಿ ನೀಡಿದ್ದರು.