ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ದ್ವಾರಕ ಏರ್ ಪೋರ್ಟ್ ಎಕ್ಸ್ ಪ್ರೆಸ್ ಮಾರ್ಗದ ವಿಸ್ತರಣೆ ಉದ್ಘಾಟಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋ ರೈಲಿನಲ್ಲಿ ಸಾಮಾನ್ಯ ಜನರೊಂದಿಗೆ ಪ್ರಯಾಣ ನಡೆಸಿದರು.
ಅಲ್ಲದೇ, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋದಲ್ಲಿ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ಸ್ವಾಗತಿಸಿದ ಮಕ್ಕಳಿಗೆ ಮೋದಿಯವರು ಚಾಕ್ಲೇಟ್‌ಗಳನ್ನು ನೀಡಿದ್ದು, ಅನೇಕ ಪ್ರಯಾಣಿಕರು ಇವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸ ಪಟ್ಟರು.