ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ಭೇಟಿ ನೀಡಿ ಅಮೃತ್ ಭಾರತ್ ಎಕ್ಸ್ಪ್ರೆಸ್ ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಅಲ್ಲದೇ, ರೈಲು ನಿಲ್ದಾಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಿಎಂ ಆವಾಸ್ ಯೋಜನೆ ಮತ್ತು ಉಜ್ವಲ ಯೋಜನೆಯ ಫಲಾನುಭವಿ ಮೀರಾ ಮಾಂಝಿ ಮನೆಗೆ ದಿಢೀರ್ ಎಂದು ಭೇಟಿ ನೀಡಿ, ಚಹಾ ಕುಡಿದು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರತೀಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮಾಂಝಿ ಅವರ ಮನೆಗೆ ಭೇಟಿ ನೀಡಿ, ಅವರನ್ನು ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸುತ್ತಿರುವ ದೃಶ್ಯ ಕಾಣಬಹುದು.
ಈ ವಿಡಿಯೋವನ್ನು 29 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅಯೋಧ್ಯಾ ಧಾಮ್ ನಿಲ್ದಾಣದಿಂದ ಹಿಂದಿರುಗುವಾಗ, ಪ್ರಧಾನಿ ಮೋದಿ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿ ಮೀರಾ ಮಾಂಝಿ ಅವರನ್ನು ಭೇಟಿ ಮಾಡಿದರು ಎಂಬ ಹೊಗಳಿಕೆಯ ಮಾತುಗಳನ್ನು ಹಾಕಿದ್ದಾರೆ.