ಬೆಂಗಳೂರು: ಇಂದು ದೇಶದಾದ್ಯಂತ ಮಕರ ಸಂಕ್ರಾಂತಿ ಆಚರಿಸಲಾಗುತ್ತಿದೆ. ಹೀಗಾಗಿ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ಶುಭಾಶಯ ತಿಳಿಸಿದ್ದಾರೆ.
ಅಲ್ಲದೇ, ಕನ್ನಡಿಗರಿಗೆ ಕನ್ನಡದಲ್ಲಿಯೇ ಪ್ರಧಾನಿ ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೇಶದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಹಾಗೂ ಸಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲ ಆಕಾಂಕ್ಷೆಗಳು ಈಡೇರಲಿ ಎಂದು ಹಾರೈಸಿದ್ದಾರೆ. ಅಲ್ಲದೇ, ಹಬ್ಬದ ಹಿನ್ನೆಲೆಯಲ್ಲಿ ಗಣ್ಯರು ಕೂಡ ಶುಭಾಶಯ ಕೋರಿದ್ದಾರೆ.








