ನವದೆಹಲಿ: ತೆಲಂಗಾಣ (Telangana) ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ರೇವಂತ್ ರೆಡ್ಡಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ.
ಅಲ್ಲದೇ, ನೂತನ ಸಿಎಂ ರೇವಂತ್ ರೆಡ್ಡಿ ಅವರಿಗೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದಾರೆ. ರೇವಂತ್ ರೆಡ್ಡಿ ಅವರು ಇಂದು ತೆಲಂಗಾಣ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಲ್ಲದೇ ಅವರೊಂದಿಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲೆ ತಮಿಳಿಸೈ ಸುಂದರರಾಜನ್ ಪ್ರಮಾಣ ವಚನ ಬೋಧಿಸಿದರು. ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಪ್ರಧಾನಿ, ಎಕ್ಸ್ ಮೂಲಕ ಶುಭಾಶಯ ತಿಳಿಸಿದ್ದಾರೆ.
ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ರೇವಂತ್ ರೆಡ್ಡಿಯವರಿಗೆ ಅಭಿನಂದನೆಗಳು. ರಾಜ್ಯದ ಪ್ರಗತಿ ಮತ್ತು ನಾಗರಿಕರ ಕಲ್ಯಾಣಕ್ಕಾಗಿ ನನ್ನಿಂದ ಸಾಧ್ಯವಿರುವ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.