ಭುವನೇಶ್ವರ: ಪ್ರಧಾನ ಮಂತ್ರಿ ಪ್ರಧಾನ ಕಾರ್ಯದರ್ಶಿಯ ಮಗಳು ಹಾಗೂ ಅಳಿಯ ಎಂದು ನಂಬಿಸಿ ವಂಚಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಜನರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ಓಡಿಶಾ ದಂಪತಿಯನ್ನು (Odisha) ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕಂಧಮಾಲ್ ಜಿಲ್ಲೆಯ ನಿವಾಸಿ ಪತ್ನಿ ಹನ್ಸಿತಾ ಅಭಿಲಿಪ್ಸಾ (38) ಹಾಗೂ ಪತಿ ಅನಿಲ್ ಕುಮಾರ್ ಮೊಹಂತಿ ಎಂದು ಗುರುತಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ (PK Mishra) ಅವರ ಮಗಳು ಮತ್ತು ಅಳಿಯನ ಸೋಗಿನಲ್ಲಿ ಬಂದು ಜನರನ್ನು ವಂಚಿಸುತ್ತಿದ್ದರು ಎನ್ನಲಾಗಿದೆ.
ಇವರ ವಂಚನೆಯ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಒಡಿಶಾ ಪೊಲೀಸರು ಬಂಧಿಸಿದ್ದಾರೆ. ತನಿಖೆ ನಡೆಸಿದ ಪೊಲೀಸರು ದಂಪತಿಯ ನಿವಾಸದಿಂದ ಹಲವಾರು ಛಾಯಾಚಿತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅವುಗಳಲ್ಲಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಉನ್ನತ ವ್ಯಕ್ತಿಗಳೊಂದಿಗೆ ತೆಗೆಸಿಕೊಂಡಿರುವ ಫೋಟೋಗಳನ್ನು ಇಟ್ಟುಕೊಂಡು ವಂಚಿಸಿದ್ದಾರೆ ಎನ್ನಲಾಗಿದೆ. ಶ್ರೀಮಂತ ಉದ್ಯಮಿ, ಬಿಲ್ಡರ್‌ಗಳು, ಗಣಿಗಾರಿಕೆಯ ನಿರ್ವಾಹಕರು ಸೇರಿದಂತೆ ಇತರ ಪ್ರಭಾವಿ ವ್ಯಕ್ತಿಗಳನ್ನು ವಂಚಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.








