ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರೈಂ ನ್ಯೂಸ್ @ 8 ಪಿಎಂ : ಕಿಚ್ಚನ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್, ಪಟಾಕಿ ಮಾರಾಟಕ್ಕೆ ‘ಗ್ರೀನ್’ ಸಿಗ್ನಲ್

Namratha Rao by Namratha Rao
November 7, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

prime news

ಮಹಾದೇವ ಭೈರಗೊಂಡ ಮೇಲೆ ಗುಂಡಿನ ದಾಳಿ : ಐವರ ಬಂಧನ

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ವಿಜಯಪುರ : ಭೀಮಾ ತೀರದ ಮಹಾದೇವ ಭೈರಗೊಂಡ ಸಾಹುಕಾರ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಯಾಸೀನ ದಂದರಗಿ (25), ಕರೆಪ್ಪ ಸೊನ್ನದ (25), ಸಿದ್ದು ಬೊಮ್ಮನಜೋಗಿ (34), ಸಂಜು ಮಾನಕರ (28), ರವಿ ಬಂಡಿ (20) ಬಂಧಿತ ಆರೋಪಿಗಳಾಗಿದ್ದಾರೆ. ಈವರೆಗೂ ಈ ಪ್ರಕರಣ ಸಂಬಂಧ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ದೀಪಾವಳಿಗೆ ಪಟಾಕಿ ಮಾರಾಟಕ್ಕೆ ‘ಗ್ರೀನ್’ ಸಿಗ್ನಲ್: ಶರತ್ತು ಅನ್ವಯ..!

ಬೆಂಗಳೂರು: ಕೊರೊನಾ ಹಾವಳಿ ನಡುವೆಯೂ ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯ ದೀಪಾವಳಿ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆದ್ರೆ  ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಅದ್ರಲ್ಲೂ ಕೇವಲ ಇರುವವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ ಪಟಾಕಿ ಮಾರಾಟಕ್ಕೂ ಸಮಯ ನಿಗದಿ ಮಾಡಲಾಗಿದೆ. ಅಂದ್ಹಾಗೆ ನವೆಂಬರ್ 11 ರಿಂದ 16 ರವರೆಗೆ ಮಾತ್ರ ಪಟಾಕಿ ಮಾರಾಟ ಮಾಡಬಹುದಾಗಿದೆ.

ಶಾಲಾ-ಕಾಲೇಜು ಆರಂಭಕ್ಕೆ ಆತುರ ಬೇಡ.. ಹುಷಾರ್ : ಹೆಚ್ ಡಿಕೆ

ಬೆಂಗಳೂರು : ಕೊರೊನಾ ಸಂಕಷ್ಟದ ಮಧ್ಯೆ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಸರ್ಕಾರ ಮುಂದಾಗುತ್ತಿದ್ದು, ಇದಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್…!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.prime news

ಸವದಿಯ `ಮೂರು ಬಾಗಿಲು’ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ

ಬೆಳಗಾವಿ : ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅವನತಿಯ ಅಂಚಿನಲ್ಲಿದೆ ಎಂಬ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಎಲ್ಲಾ ಪಕ್ಷಗಳಲ್ಲೂ ಗುಂಪುಗಾರಿಕೆ ಇದ್ದೇ ಇರುತ್ತದೆ. ಅದೇನು ಹೊಸದಲ್ಲ ಎಂದಿದ್ದಾರೆ. ಇದೇ ವೇಳೆ ಶಿರಾ ಕ್ಷೇತ್ರದಲ್ಲಂತೂ ಗೆಲುವು ಖಚಿತ ಎಂದು ರಾರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಷ್ಟ ಎಂದು ಪರೋಕ್ಷವಾಗಿ ಒಪ್ಪಿಕೊಂಡರು.

ಚಿಕ್ಕಮಗಳೂರಿನಲ್ಲಿ 30 ತಿಂಗಳಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆ : ಸಚಿವ ಡಾ.ಕೆ.ಸುಧಾಕರ್

ಚಿಕ್ಕಮಗಳೂರು :  ಕಾಫಿನಾಡು ಚಿಕ್ಕಮಗಳೂರಿನಲ್ಲಿ 24 ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಕಾಲೇಜಿನ ಕಟ್ಟಡ ನಿರ್ಮಾಣ ಯೋಜನೆ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು “ಕಟ್ಟಡದ ನಿರ್ಮಾಣದ ಭೂಮಿ ಪೂಜೆಗೆ ಡಿಸೆಂಬರ್ ನಲ್ಲಿ ದಿನ ಗೊತ್ತುಪಡಿಸಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಕಟ್ಟಡ ವಿನ್ಯಾಸ ಉತ್ತಮವಾಗಿದ್ದು, ಕೆಲ ಬದಲಾವಣೆ ಸೂಚಿಸಲಾಗಿದೆ ಎಂದು ತಿಳಿಸಿದ್ರು.prime news

ಕನ್ನಡದ ಕೆಲಸಕ್ಕಾಗಿ, ಏಳಿಗೆಗಾಗಿ ನಮ್ಮ ಸರ್ಕಾರ ಬದ್ಧ : ಬಿಎಸ್ ವೈ

ಬೆಂಗಳೂರು : ಕನ್ನಡದ ಕೆಲಸಕ್ಕಾಗಿ, ಏಳಿಗೆಗಾಗಿ ನಮ್ಮ ಸರ್ಕಾರ ಸದಾ ಬದ್ಧವಾಗಿರುತ್ತೆ. ಕನ್ನಡ ಭಾಷೆಗಾಗಿ ಕನ್ನಡ ಕಾಯಕದ ವರ್ಷ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವಿಧ ಕ್ಷೇತ್ರಗಳಗಳಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪ್ರದಾನಕ್ಕೂ ಮುಂಚೆ ಮಾತಾನಾಡಿದ ಮುಖ್ಯಮಂತ್ರಿಗಳು, ಭಾಷೆ – ಸಂಸ್ಕೃತಿಯು ಹೆತ್ತ ತಾಯಿಗೆ ಸಮಾನ. ಹೀಗಾಗಿ ಎಂದಿಗೂ ಗೌರವ ಸಲ್ಲಿಸಬೇಕು ಎಂದಿದ್ದಾರೆ.

ಬೆಳ್ಳಂಬೆಳಿಗ್ಗೆ ಜೈಲಿನಿಂದಲೇ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಂಗ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು ಧಾರವಾಡಕ್ಕೆ ಕರೆತರಲಾಗಿದ್ದು, ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಗುರುವಾರ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾಗ ಧಾರವಾಡದ ಉಪನಗರ ಠಾಣೆ ಎದುರು ಇಡೀ ದಿನ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಹೈಡ್ರಾಮ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಹಸ್ಯ ಸ್ಥಳಕ್ಕೆ ವಿನಯ್ ಕುಲಕರ್ಣಿ ಅವರನ್ನು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ಯುಎಸ್ ಅಧ್ಯಕ್ಷೀಯ ಚುನಾವಣೆ : ಗೆಲುವು ನಮ್ದೇ ಎಂದ ಬಿಡೆನ್

ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಸೂಪರ್ ಓವರ್ ನಂತಾಗಿದೆ. ಭಾರಿ ಕುತೂಹಲಕ್ಕೆ ಕಾರಣವಾಗಿರುವ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಮತ ಎಣಿಕೆ ಮುಂದುವರಿದ್ದು, ರೋಚಕ ಹಂತಕ್ಕೆ ತಲುಪಿದೆ. ಅದರಲ್ಲೂ ಹಾಲಿ ಅಧ್ಯಕ್ಷ ಟ್ರಂಪ್ ಮುನ್ನಡೆಯಲ್ಲಿದ್ದ ರಾಜ್ಯಗಳಲ್ಲಿ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಟ್ರಂಪ್ ಗೆ ಗೆಲುವು ಇನ್ನೂ ದೂರ ಸರಿದಿದೆ.

ಇದೇ ವೇಳೆ ಟ್ರಂಪ್ ವಿರುದ್ಧ ಕಿಡಿಕಾರಿರುವ ಜೋ, ಮತ ಎಣಿಕೆ ನಿಲ್ಲಿಸಲು ಯಾರೆಲ್ಲ ಪ್ರಯತ್ನಿಸುತ್ತಿದ್ದಾರೆ ಎಂಬುದಕ್ಕೆ ನಾನು ತಲೆಕೆಡಿಸಿಕೊಳ್ಳಲ್ಲ. ನಾವು ಪ್ರಜಾಪ್ರಭುತ್ವದಲ್ಲಿ ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದೇವೆ. ಆದರೆ ರಾಜಕೀಯದ ಉದ್ದೇಶ ರಾಷ್ಟ್ರಕ್ಕಾಗಿ ಕೆಲಸ ಮಾಡುವುದು. ನಾವು ವಿರೋಧಿಗಳಾಗಿರಬಹುದು. ಆದರೆ ನಾವು ಶತ್ರುಗಳಲ್ಲ, ನಾವು ಅಮೆರಿಕನ್ನರು ಎಂದು ಹೇಳಿದ್ದಾರೆ.

ದೀಪಾವಳಿ ಹಬ್ಬಕ್ಕೆ ಕಿಚ್ಚನ ಅಭಿಮಾನಿಗಳಿಗೆ ಕಾದಿಗೆ ಬಂಪರ್ ಉಡುಗೊರೆ..!
ಸದ್ಯ ಹೈದ್ರಾಬಾದ್ ನಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಬಹುನಿರೀಕ್ಷಿತ ಪ್ಯಾಂಟಮ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಈ ಸಿನಿಮಾದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತ ಕಿಚ್ಚನ ನಟನೆಯ ಕೋಟಿಗೊಬ್ಬ 3 ಸಹ ರಿಲೀಸ್ ಹಂತದಲ್ಲಿದ್ದು, ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಕಾತರರಿಂದ ಕಾಯುತ್ತಿದ್ದಾರೆ ಅಭಿಮಾನಿಗಳು. ನವೆಂಬರ್ 15ಕ್ಕೆ ಕೋಟಿಗೊಬ್ಬ -3 ಸಾಂಗ್ ರಿಲೀಸ್ ಮಾಡಲಿದೆಯಂತೆ ಚಿತ್ರತಂಡ. ಹೌದು ಕೋಟಿಗೊಬ್ಬ-3  ಹಾಡು ಅಭಿಮಾನಿಗಳನ್ನ ರಂಜಿಸಲು ದೀಪಾವಳಿಗೆ ಬರುತ್ತಿದೆ. ಅಂದ್ಹಾಗೆ ಈ ಹಾಡಿನಲ್ಲಿ ಕಿಚ್ಚನ ಜೊತೆಗೆ ನಟಿ ಆಶಿಕಾ ರಂಗನಾಥ್ ಹೆಜ್ಜೆ ಹಾಕಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಕಿಚ್ಚನ ಜೊತೆಗೆ ಆಶಿಕಾ ಸ್ಕ್ರೀನ್ ಶೇರ್ ಮಾಡಿದಂತೆ ಆಗುತ್ತೆ.prime news

ಆರ್ ಸಿಬಿ ಕಪ್ ಗೆಲ್ಲಬೇಕಿದ್ದರೇ ನಾಯಕತ್ವ ಬದಲಿಸಿ ಅಂದಿದ್ದೇಕೆ  ಗಂಭೀರ್..!

ಅಬುಧಾಬಿ : ಪ್ರತಿ ಬಾರಿಯಂತೆ ಈ ಬಾರಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರಿಗೈಯಲ್ಲಿ ಐಪಿಎಲ್ ನಿಂದ ಹೊರಬಿದ್ದಿದೆ. ಈ ಸಲ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸದಿಂದ ಟೂರ್ನಿ ಆರಂಭಿಸಿದ್ದ ಆರ್ ಸಿಬಿ ತಂಡ ಪ್ಲೇ ಆಪ್ ನಲ್ಲಿ ಸೋಲುಂಡು ನಿರಾಸೆ ಅನುಭವಿಸಿದೆ.  ಇತ್ತ ಈ ಸಲ ಕಪ್ ನಮ್ಮದೇ ಎಂದು ಬೀಗುತ್ತಿದ್ದ ಆರ್ ಸಿಬಿಯನ್ಸ್ ನಿನ್ನೆ ಬೆಂಗಳೂರು ತಂಡ ಸೋಲುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ತಂಡದ ವಿರುದ್ಧ ಕಿಡಿಕಾರುತ್ತಿದ್ದಾರೆ.

ಈ ಮಧ್ಯೆ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಆರ್ ಸಿಬಿ ಐಪಿಎಲ್ ಕಪ್ ಗೆಲ್ಲಬೇಕಿದ್ದರೇ ಈ ಬದಲಾವಣೆ ಅನಿವಾರ್ಯ ಎಂದು ಸಲಹೆ ನೀಡಿದ್ದಾರೆ. ಖಾಸಗಿ ಕ್ರೀಡಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಐಪಿಎಲ್ ಕೂಟದಲ್ಲಿ ಇದುವರೆಗೆ ಎಂಟು ಬಾರಿ ಆರ್ ಸಿಬಿ ತಂಡವನ್ನು ಮುನ್ನಡೆಸಿರುವ ವಿರಾಟ್ ಕೊಹ್ಲಿ ಇದುವರೆಗೂ ಒಂದೂ ಕಪ್ ಗೆದ್ದಿಲ್ಲ. ಹೀಗಾಗಿ ಆರ್ ಸಿಬಿಯ ನಾಯಕತ್ವವನ್ನು ವಿರಾಟ್ ತ್ಯಜಿಸಬೇಕು ಎಂದು ಹೇಳಿದ್ದಾರೆ.

prime news

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cm bs yaditurappakumarswamiSatish Jarakiholi
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram