ಕಲಬುರಗಿ: ಲೈಂಗಿಕ ಕಿರುಕುಳ ಆರೋಪದ ಕುರಿತು ವಿದ್ಯಾರ್ಥಿನಿಯರು ಮಾಡಿದ್ದ ದೂರನ್ನು ನಿರ್ಲಕ್ಷಿಸಿದ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.
ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ಪ್ರಾಂಶುಪಾಲರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕನನ್ನು (PT Teacher) ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪ್ರಾಂಶುಪಾಲರನ್ನೂ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ದೈಹಿಕ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದ ಕುರಿತು ಪ್ರಾಂಶುಪಾಲರಿಗೆ ಲಿಖಿತವಾಗಿ ದೂರು ನೀಡಿದ್ದರು. ಆದರೂ ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ.








