ಪ್ರಾಂಶುಪಾಲರೊಬ್ಬರು ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಕಲು ಮಾಡುವುದು ಹೇಗೆ ಎಂದು ಹೇಳಿಕೊಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಮೌಹು ಜಿಲ್ಲೆಯ ಖಾಸಗಿ ಶಾಲೆಯೊಂದರ ಪ್ರಾಂಶುಪಾಲರನ್ನು ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮಂಗಳವಾರದಿಂದ ಪ್ರೌಢ ಶಿಕ್ಷಣ ಮಂಡಳಿ ಪರೀಕ್ಷೆ ಆರಂಭವಾಗಲಿದ್ದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪರೀಕ್ಷೆಯಲ್ಲಿ ನಕಲು ಮಾಡುವುದು ಹೇಗೆ ಎಂದು ಪ್ರಾಂಶುಪಾಲ ಹೇಳಿಕೊಡುವ ವಿಡಿಯೋ ವೈರಲ್ ಆಗಿದೆ.
ಒಂದು ವೇಳೆ ನೀವು ನಕಲು ಮಾಡುವಾಗ ಸಿಕ್ಕಿ ಬಿದ್ದರೂ ನೀವು ಶಿಸ್ತು ಕಾಪಾಡಬೇಕು. ಮತ್ತೊಬ್ಬರ ಕೈ ಮುಟ್ಟುವುದು, ಅವರನ್ನು ಕರೆಯುವುದು, ಮಾತನಾಡುವುದನ್ನು ಮಾಡಬೇಡಿ. ನೀವು ನಕಲು ಮಾಡಲು ಹೆದರಬೇಡಿ, ಶಿಕ್ಷಕರು ನನ್ನ ಸ್ನೇಹಿತರು ಎಂದೆಲ್ಲಾ ಪ್ರಾಂಶುಪಾಲ ವಿದ್ಯಾರ್ಥಿಗಳಿಗೆ ಸೂಚನೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಮೌಹು ಜಿಲ್ಲೆಯ ಖಾಸಗಿ ಶಾಲೆಯ ಪ್ರಾಂಶುಪಾಲ ಹಾಗೂ ಮ್ಯಾನೇಜರ್ ಅವರನ್ನು ಬಂಧಿಸಲಾಗಿದೆ. ಈ ವಿಡಿಯೋವನ್ನು ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ದೂರು ನೀಡುವ ಪೋರ್ಟಲ್ ನಲ್ಲಿ ವಿದ್ಯಾರ್ಥಿಯೊರ್ವ ಅಪ್ ಲೋಡ್ ಮಾಡಿದ್ದ.
ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!
ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...








