ಮದುವೆಯಾಗಲು ಇಷ್ಟವಿಲ್ಲವೆಂದು ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಜೈಲು ಸಿಬ್ಬಂದಿ

1 min read
committed suicide

ಮದುವೆಯಾಗಲು ಇಷ್ಟವಿಲ್ಲವೆಂದು ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಜೈಲು ಸಿಬ್ಬಂದಿ

ಗ್ವಾಲಿಯರ್: ಮಧ್ಯಪ್ರದೇಶದ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಆಘಾತಕಾರಿ ಘಟನೆ ಸಂಭವಿಸಿದೆ. ಸುಮಾರು ಒಂದು ಗಂಟೆಗೆ, ಗ್ವಾಲಿಯರ್ ನಿವಾಸಿ ಜೈಲು ಸಿಬ್ಬಂದಿ ಸುರೇಂದ್ರ ಸಿಂಗ್ ತೋಮರ್ ಸಂಜಯ್ ಗಾಂಧಿ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಆತನಿಂದ ಪೊಲೀಸರಿಗೆ ಆತ್ಮಹತ್ಯೆ ಪತ್ರವೂ ಬಂದಿದೆ. ಆತ್ಮಹತ್ಯೆ ಪತ್ರದಲ್ಲಿ ಆತ ತಾನು ಅನಾರೋಗ್ಯದಿಂದ ಬಳಲುತ್ತಿದ್ದು, ಮದುವೆಯಾಗಲು ಇಷ್ಟವಿರಲಿಲ್ಲ. ಈ ಕಾರಣದಿಂದ ತಾನು ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾನೆ.

committed suicide

ವರದಿಗಳ ಪ್ರಕಾರ, ಜೈಲು ಸಿಬ್ಬಂದಿ ಮೇ 7 ರಂದು ಗ್ವಾಲಿಯರ್ ನಲ್ಲಿ ಮದುವೆಯಾಗಬೇಕಿತ್ತು. ಸಂಜಯ್ ಗಾಂಧಿ ಆಸ್ಪತ್ರೆಯ ಸಿಎಮ್ಒ ಡಾ.ಅತುಲ್ ಸಿಂಗ್, ನಾಲ್ಕನೇ ಮಹಡಿಯಿಂದ ಜಿಗಿದ ಕಾರಣ ದೇಹದಿಂದ ಸಾಕಷ್ಟು ರಕ್ತಸ್ರಾವವಾಗಿದ್ದು, ಆತನ ಸಾವಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಠಾಣೆ ಉಸ್ತುವಾರಿ ಅಮ್ಹಿಯಾ ಶಿವ ಅಗರ್ವಾಲ್ ತಿಳಿಸಿದ್ದಾರೆ. ಸುರೇಂದ್ರ ಸಿಂಗ್ ತಂದೆಯ ಹೆಸರಿಗೆ ಆತ್ಮಹತ್ಯೆ ಪತ್ರ ಬರೆದಿದ್ದಾನೆ.
committed suicide

ಪತ್ರದಲ್ಲಿ, ನಾನು ಮದುವೆಯಾಗಲು ಬಯಸುವುದಿಲ್ಲ. ಏಪ್ರಿಲ್ 1 ರಿಂದ ನನಗೆ ಮೂತ್ರದಲ್ಲಿ ರಕ್ತ ಕಾಣಿಸಿಕೊಂಡಿದೆ. ಅದು ನಂತರ ಗಂಭೀರ ಕಾಯಿಲೆಯ ರೂಪವನ್ನು ಪಡೆಯಬಹುದು. ಆದ್ದರಿಂದ, ಮದುವೆಯಾಗುವ ಮೂಲಕ ಯಾರ ಜೀವನವನ್ನು ಹಾಳುಮಾಡಲು ನಾನು ಬಯಸುವುದಿಲ್ಲ ಎಂದು ಬರೆದಿದ್ದಾನೆ. ಪ್ರಕರಣದ ತನಿಖೆ ನಡೆಯುತ್ತಿದೆ.

#prisonguard #suicidenote

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd