Mumbai: ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೈದಿ

1 min read
Mumbai Jail Saaksha Tv

ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೈದಿ

ಮುಂಬೈ: ಜೈಲಿನಲ್ಲಿಯೇ ಕೈದಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯರವಾಡ ತೆರೆದ ಜೈಲಿನಲ್ಲಿರುವ ಬ್ಯಾರಕ್‍ನಲ್ಲಿ ನಡೆದಿದೆ.

ಗಣೇಶ್ ತಾಂಬೆ (53) ಆತ್ಮಹತ್ಯೆಗೆ ಮಾಡಿಕೊಂಡ ಕೈದಿ. ಈತನು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದನು. ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಡುಗೆ ಮನೆಯಲ್ಲಿ ಕೆಲಸ ಮುಗಿಸಿದ್ದ ತಾಂಬೆ ಬ್ಯಾರಕ್‍ನೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಘಟನೆ ಕುರಿತು ಮಾತನಾಡಿದ ಉಪ ಪೊಲೀಸ್ ಆಯುಕ್ತ ರೋಹಿದಾಸ್ ಪವಾರ್ ಕೈದಿ ಗುರುವಾರ ಮಧ್ಯಾಹ್ನ ಯರವಾಡ ಜೈಲಿನ ಬ್ಯಾರಕ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪ್ರಾಥಮಿಕ ತನಿಖೆಯು ಆತ್ಮಹತ್ಯೆಯನ್ನು ಸೂಚಿಸುತ್ತದೆ. ಆತ್ಮಹತ್ಯೆಗೆ ಕಾರಣ ಹುಡುಕುತ್ತಿದ್ದೇವೆ ಎಂದು ತಿಳಿಸಿದ್ದಾರೆ

ಈತ 2010ರಲ್ಲಿ ವಿರಾರ್‌ನಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರಲ್ಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd