Private bus accident-ಚಿಕ್ಕಬಳ್ಳಾಪುರದಲ್ಲಿ ಬಸ್ ಪಲ್ಟಿಯಾಗಿ 30 ಮಂದಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಶನಿವಾರ ರಾತ್ರಿ ಹಿಂದೂಪುರದಿಂದ ತಿರುಪತಿಗೆ ಹೊಗುತ್ತಿದ್ದ ಭಾರತಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದ್ದು ಈ ಬಸ್ ನಲ್ಲಿ 45 ಕ್ಕೂ ಹೆಚ್ಚು ಜನ ಪ್ರಯಾಣಿಸಿತ್ತಿದ್ದರು.
ಬಸ್ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕಕ್ಕೆ ಉರುಳಿಬಿದ್ದಿದೆ.
ಈ ಸಂದರ್ಬದಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಸಣ್ಣ ಪುಟ್ಟ ಗಾಯಗಳಾಗಿ ಕೆಲವರಿಗೆ ಬೆನ್ನು ಮೂಳೆ ಮುರಿದು , ಕೈ ಕಾಲು, ಕಣ್ಣಿನ ಭಾಗದಲ್ಲಿ ಗಾಯಗಳಾಗಿವೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಕಲಿಸಲಾಗಿದೆ.
ಈ ಪ್ರಕರಣ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಘಟನೆ ನಡೆದ ವಿಷಯ ತಿಳಿದ ಶಾಸಕ ಜೆಕೆ ಕೃಷ್ಣಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿ ತಡರಾತ್ರಿ ಗಾಯಾಳುಗಳಿಗೆ ಊಟದ ವ್ಯವಸ್ಥೆಯನ್ನೂ ಮಾಡಿದ್ದಾರೆ.








