ಖಾಸಗಿ ಬಸ್ ಅಪಘಾತ | 10 ಜನರಿಗೆ ಗಾಯ
ತುಮಕೂರು: ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಣಾಮ 10 ಜನರು ಗಾಯಗೊಂಡಿರುವ ಘಟನೆ ತುಮಕೂರು ಹೊರವಲಯದಲ್ಲಿ ನಡೆದಿದೆ.
Ka 51 AF 3434 ನಂಬರ್ ನ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಬೆಳಗಿನ ಜಾವ 3.50 ಕ್ಕೆ ಸುಮಾರಿಗೆ, ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವ ಪ್ರಯಾಣಿಕನ ಕಾಲು ಮುರಿದಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Ka 51 AF 3434 ನಂಬರ್ ನ ಖಾಸಗಿ ಬಸ್ ಸೊರಬದಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.









