ಚಿತ್ರದುರ್ಗ: ಖಾಸಗಿ ಬಸ್ ವೊಂದು ಕಣಿವೆ ಪ್ರದೇಶದಲ್ಲಿ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ, ಸುಮಾರು 38 ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಹತ್ತಿರ ಈ ಘಟನೆ ನಡೆದಿದೆ. ಈ ಖಾಸಗಿ ಬಸ್ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮೂವರು ಸಾವನ್ನಪ್ಪಿದ್ದು, ಈ ಪೈಕಿ ಸುಮಾರು ಮೂರ್ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಈ ಖಾಸಗಿ ಬಸ್ ನಲ್ಲಿ ಸುಮಾರು 50 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.