ಬೆಂಗಳೂರು : ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹ ಕೊಡಲು ಸತಾಯಿಸಿದ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಕೊರೊನಾ ಸಂಕಷ್ಟ ಕಾಲದಲ್ಲಿ ಹಣಗಳಿಸುವುದು ಖಾಸಗಿ ಆಸ್ಪತ್ರೆಗಳಿಗೆ ಮಾನದಂಡವಾಗಬಾರದು ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ” ಕೊರೊನಾ ಸಂಕಷ್ಟ ಕಾಲದಲ್ಲಿ ಹಣಗಳಿಸುವುದು ಖಾಸಗಿ ಆಸ್ಪತ್ರೆಗಳಿಗೆ ಮಾನದಂಡವಾಗಬಾರದು. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದು, ಆ ಖಾಸಗಿ ಆಸ್ಪತ್ರೆ ಎರಡು ದಿನಗಳಿಂದ ಶವ ಕೊಡದೆ ಸತಾಯಿಸುತ್ತಿದ್ದಾರೆ ಎಂಬ ಸುದ್ದಿ, ಮಾಧ್ಯಮಗಳಲ್ಲಿ ಗಮನಿಸಿದ್ದೇನೆ”.
ಕೊರೊನಾ ಸಂಕಷ್ಟ ಕಾಲದಲ್ಲಿ ಹಣಗಳಿಸುವುದು ಖಾಸಗಿ ಆಸ್ಪತ್ರೆಗಳಿಗೆ ಮಾನದಂಡವಾಗಬಾರದು. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದು, ಆ ಖಾಸಗಿ ಆಸ್ಪತ್ರೆ ಎರಡು ದಿನಗಳಿಂದ ಶವ ಕೊಡದೆ ಸತಾಯಿಸುತ್ತಿದ್ದಾರೆ ಎಂಬ ಸುದ್ದಿ, ಮಾಧ್ಯಮಗಳಲ್ಲಿ ಗಮನಿಸಿದ್ದೇನೆ (1/2) pic.twitter.com/tzCmm9oZrc
— Dr Sudhakar K (@mla_sudhakar) August 9, 2020
“9 ಲಕ್ಷ ರೂ ಹಣ ಕಟ್ಟಿದ ಮೇಲೆ ಮೃತದೇಹ ಕೊಡುತ್ತೇವೆ ಎಂದು ಕುಟುಂಬದವರನ್ನು ಹಿಂಸೆ ಮಾಡಿರುವುದು ತೀರಾ ಖಂಡನೀಯ. ಆ ಆಸ್ಪತ್ರೆ ಮುಖ್ಯಸ್ಥರ ಜೊತೆ ಮಾತನಾಡಿ ಆ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇನೆ” ಎಂದು ಭರವಸೆ ನೀಡಿದ್ದಾರೆ.