ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಕಳೆದ 10 ತಿಂಗಳಿಂದ ಮುಚ್ಚಿರುವ ರಾಜ್ಯದ ಖಾಸಗಿ ಶಾಲೆಗಳ ಶಿಕ್ಷಕರಿಗೆ ವೇತನ ಪರಿಹಾರವಾಗಿ 300 ಕೋಟಿ ರೂ. ನೀಡಲು ರಾಜ್ಯ ಸರ್ಕಾರ ವಿರುದ್ಧ ಹೋರಾಟಕ್ಕೆ ಸಜ್ಜಾಗಿಬೆ.
ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿರುವ ಮಾನತ್ಯೆ ಪಡೆದ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ(ರುಪ್ಸಾ), ಅನುದಾನ ಕರ್ನಾಟಕ ಅನುದಾನ ರಹಿತ ಖಾಸಗಿ ಪ್ರೌಢಶಾಲೆಗಳ ಒಕ್ಕೂಟ(ಕ್ಯಾಮ್ಸ್) ಶೀಘ್ರವೇ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಆರಂಭಿಸುವುದಾಗಿ ಎಚ್ಚರಿಕೆ ನೀಡಿವೆ.
ಪೋಷಕರು ಶುಲ್ಕ ಕಟ್ಟದ ಪರಿಣಾಮ ಖಾಸಗಿ ಶಾಲೆಗಳು ಶಿಕ್ಷಕರಿಗೆ ವೇತನ ನೀಡಲು ಆಗುತ್ತಿಲ್ಲ. ರಾಜ್ಯಾದ್ಯಂತ 5 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಶಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸಂಬಳ ಇಲ್ಲದೆ ಶಿಕ್ಷಕರ ಕುಟುಂಬಗಳು ಬೀದಿಗೆ ಬಂದಿವೆ.
ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜತೆ ನಡೆದ ಸಭೆಯಲ್ಲಿ ಸರ್ಕಾರ 1000 ಕೋಟಿ ರೂ. ಸಂಬಳ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಅಷ್ಟೂ ಸಾಧ್ಯವಾಗದೇ ಇದ್ದರೆ ಕನಿಷ್ಠ 300 ಕೋಟಿಗಳನ್ನಾದರೂ ನೀಡುವಂತೆ ತಿಳಿಸಿದ್ದೇವೆ. ಆದರೆ, ಆರ್ಥಿಕ ಇಲಾಖೆ ಪ್ರಸ್ತಾವನೆ ತಿರಸ್ಕರಿದ್ದು, ಖಾಸಗಿ ಶಾಲೆಗಳ ಶಿಕ್ಷಕರ ವರ್ಗದ ಕ್ಷಮೆ ಕೇಳಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಇದು ನಿಜಕ್ಕೂ ದುರದೃಷ್ಟಕರ ಸಂಗತಿ ಎಂದು ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಂಘದ ಅಧ್ಯಕ್ಷ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.
ನಮ್ಮ 15 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದರು. ಹೀಗಾಗಿ ಮಂಗಳವಾರ ಸ್ಥಗಿತ ಮಾಡಿದ್ದ ಆನ್ಲೈನ್ ಕ್ಲಾಸ್ಗಳನ್ನು ಪುನಃ ಆರಂಭಿಸಿದ್ದೆವು. ಆದರೆ, ಶುಕ್ರವಾರ ಏಕಾಏಕಿ ಪತ್ರಿಕಾ ಪ್ರಕಟಣೆಯಲ್ಲಿ ಆರ್ಥಿಕ ನೆರವು ಸಾಧ್ಯವಿಲ್ಲ ಎಂದು ಹೇಳಿರುವುದು ನೋವು ಉಂಟು ಮಾಡಿದೆ. ಇದನ್ನು ರುಪ್ಸಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.
ಖಾಸಗಿ ಶಾಲೆಗಳು ಆರ್ಥಿಕವಾಗಿ ದುಸ್ಥಿತಿಗೆ ಬಂದಿರುವುದು ಹಾಗೂ ಶಿಕ್ಷಕರಿಗೆ ಸಂಬಳ ನೀಡಲು ಆಗದೇ ಇರುವ ಸ್ಥಿತಿ ನಿರ್ಮಾಣವಾಗಿರುವುದು ನಮ್ಮ ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ವೈಫಲ್ಯದಿಂದ. ಇದರಿಂದ ಕರ್ನಾಟಕದ ಶಿಕ್ಷಣ ವ್ಯವಸ್ಥೆ ಬುಡಮೇಲಾಗಿದೆ. ಖಾಸಗಿ ಶಾಲೆಗಳ ಶಿಕ್ಷಕರಿಗೆ ಸಂಬಳ ನೀಡಲು ಕನಿಷ್ಟ 300 ಕೋಟಿ ರೂ. ನೀಡುವ ಭರವಸೆ ನೀಡಿದ್ದರು. ಆದರೆ, ಅವರು ನೀಡಿದ್ದ ಭರವಸೆ ಈಡೇರಿಸಲು ವಿಫಲರಾಗಿದ್ದಾರೆ.
ಸುರೇಶ್ ಕುಮಾರ್ ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಶಿಕ್ಷಕರ ಪರ ಕೆಲಸ ಮಾಡಲು ಸಾಧ್ಯವಾಗದೇ ಇದ್ದರೆ ಸುರೇಶ್ ಕುಮಾರ್ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುವಂತೆ ಹೇಳಿದ್ದೆವು. ಆದರೂ ಮುಂದುವರೆದಿರುವುದು ದುರದೃಷ್ಟಕರ ಸಂಗತಿ ಎಂದು ಲೋಕೇಶ್ ತಾಳಿಕಟ್ಟೆ ಆರೋಪಿಸಿದ್ದಾರೆ.
ಶಿಕ್ಷಣ ಇಲಾಖೆ ಧೋರಣೆ ಖಂಡಿಸಿ ಖಾಸಗಿ ಶಾಲೆಗಳ ಸಂಘ ರುಪ್ಸಾ ವತಿಯಿಂದ ಸೋಮವಾರ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಪತ್ರ ಪತ್ರ ಸಲ್ಲಿಸಲಾಗುವುದು. ನಿಗಧಿಯಂತೆ ಶೈಕ್ಷಣಿಕ ಚಟುವಟಿಕೆ ಬಂದ್ ಮಾಡಿ ಜನವರಿ 6ರಿಂದ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರ ನಡೆಸುತ್ತೇವೆ ಎಂದು ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.
ಹೋರಾಟ ನಡೆಸಲು ಕ್ಯಾಮ್ಸ್ ನಿರ್ಧಾರ
ಖಾಸಗಿ ಶಾಲೆಗಳ ಶಿಕ್ಷಕರಿಗೆ ಸಂಬಳ ಪರಿಹಾರ ನೀಡಲು ಆಗುತ್ತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ನೀಡಿರುವ ಹೇಳಿಕೆ ತುಂಬಾ ನೋವನ್ನುಂಟುಮಾಡಿದೆ. ಖಾಸಗಿ ಶಿಕ್ಷಕ ವರ್ಗಕ್ಕೆ ಏನೂ ಮಾಡಲು ಆಗಲ್ಲ ಎಂದು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸುರೇಶ್ಕುಮಾರ್ ಅವರ ಅಸಹಾಯಕತೆಯನ್ನು ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್’ ಖಂಡಿಸುತ್ತದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.
ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಕ್ಯಾಮ್ಸ್ನಿಂದ ಶಿಕ್ಷಕರ ಪರ ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ಶೀಘ್ರವೇ ಹೋರಾಟದ ರೂಪುರೇಷೆ ಸಿದ್ಧ ಪಡಿಸಲಾಗುವುದು ಎಂದು ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.
ಜನವರಿ 1ರಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಸರ್ಕಾರ ಆರಂಭಿಸುತ್ತಿದೆ. ಇದರ ಬೆನ್ನಲ್ಲೇ ಖಾಸಗಿ ಶಾಲೆಗಳು ಹೋರಾಟದ ಹಾದಿ ಹಿಡಿದಿರುವುದು ಯಾವ ಸ್ವರೂಪ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel