ಬಿಟ್ ಕಾಯಿನ್ ಪ್ರಕರಣ | ರಾಜ್ಯಕ್ಕೆ 3ನೇ ಮುಖ್ಯಮಂತ್ರಿ ಸಿಗಲಿದ್ದಾರೆ : ಪ್ರಿಯಾಂಕ್ ಖರ್ಗೆ
ಮೈಸೂರು: ಬಿಟ್ ಕಾಯಿನ್ ಪ್ರಕರಣದ ತನಿಕೆ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಮುಖ್ಯಮಂತ್ರಿ ಅನಿವಾರ್ಯತೆ ಉಂಟಾಗುತ್ತದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆನೂ ಹೇಳಿದ್ದೆ, ಇಂದು ಹೇಳುತ್ತಿದ್ದೇನೆ ಬಿಟ್ ಕಾಯಿನ್ ಪ್ರಕರಣ ಪ್ರಮಾಣಿಕವಾಗಿ ತನಿಕೆಯಾದರೆ ನಮ್ಮ ರಾಜ್ಯಕ್ಕೆ ಬಿಜೆಪಿಯಿಂದ 3 ನೇ ಮುಖ್ಯಮಂತ್ರಿ ಸಿಗಲಿದ್ದಾರೆ ಎಂದು ಹೇಳಿದರು.
ಇನ್ನೂ ಪಿಎಸ್ಐ ಪರೀಕ್ಷೆ ಅಕ್ರಮ ವಿಚಾರವಾಗಿ ಮಾತನಾಡಿದ ಅವರು, ತನಿಖೆ ಕಲಬುರಗಿಗೆ ಮಾತ್ರ ಸೀಮಿತವಾಗಬಾರದು. ಸರ್ಕಾರ ಸೂಕ್ತ ತನಿಖೆ ನಡೆಸದೆ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಕೇವಲ ಒಂದೇ ಪರೀಕ್ಷಾ ಕೇಂದ್ರದ ವಿರುದ್ಧ ಎಫ್ ಐಆರ್ ಮಾಡಿದ್ದಾರೆ. ಬೇರೆ ಬೇರೆ ಪರೀಕ್ಷಾ ಕೇಂದ್ರಗಳ ಮೇಲೆ ತನಿಖೆಯಾಗಬೇಕು. ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಮೇಲೂ ತನಿಖೆಯಾಗಬೇಕು ಎಂದರು.
ಅಲ್ಲದೇ ಮರು ಪರೀಕ್ಷೆ ಮಾಡಬೇಕೆಂದಿರುವ ಸರ್ಕಾರ, 545 ಮಂದಿಯ ಓಎಂಆರ್ ಶೀಟ್ ತರಿಸಿಕೊಂಡಿದ್ದಾದರೂ ಯಾಕೆ?, ಇಲ್ಲಿ ಸರ್ಕಾರದ ದಡ್ಡತನ ಎದ್ದು ಕಾಣುತ್ತಿದ್ದೆ. 300 ಜನರು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಅವರೇ ಹೇಳಿದ್ದಾರೆ. ಆದರೆ ಸರ್ಕಾರ ಇಲ್ಲಿಯವರೆಗೆ ಎಷ್ಟು ಜನರನ್ನ ಅರೆಸ್ಟ್ ಮಾಡಿದೆ?. ಒಂದೆರಡು ಕಿಂಗ್ ಪಿನ್ ಸಿಕ್ಕರೆ ಅದರಲ್ಲೇ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.