ಬೆಂಗಳೂರು : ಪ್ರಿಯಾಂಕಾ ಗಾಂಧಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ಸೂಕ್ತ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ. ನಾಯಕತ್ವ ಬದಲಾವಣೆ ಕೋರಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಾಂಗ್ರೆಸ್ ನ ಹಿರಿಯ ನಾಯಕರು ಪತ್ರ ಬರೆದಿದ್ದು, ಪಕ್ಷದಲ್ಲಿ ಸಂಚನಲ ಮೂಡಿಸಿದೆ. ಸದ್ಯ ಕಾಂಗ್ರೆಸ್ ನಲ್ಲಿ ನಾಯಕತ್ವದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.
ಈ ವಿಚಾರವಾಗಿ ಮಾಜಿ ಸಚಿವ ಹೆಚ್ ವಿಶ್ವನಾಥ್ ಮಾತನಾಡಿ, ನಾನು ಕಾಂಗ್ರೆಸ್ನಲ್ಲಿದ್ದಾಗಲೇ ಈ ಬಗ್ಗೆ ಮಾತನಾಡಿದ್ದೆ. ರಾಹುಲ್ ಗಾಂಧಿ ಬದಲಾಗಿ ಪ್ರಿಯಾಂಕ ಗಾಂಧಿಗೆ ನಾಯಕತ್ವ ನೀಡುವಂತೆ ಸಲಹೆ ನೀಡಿದ್ದೆ ಎಂದು ಹೇಳಿದ್ದಾರೆ.
ಭಾರತ ಅತ್ಯಂತ ದೊಡ್ಡ ಗಣತಂತ್ರ ರಾಷ್ಟ್ರ. ಈ ದೇಶದ ರಾಷ್ಟ್ರೀಯ ಪಕ್ಷದ ನಾಯಕನಾಗುವ ಸಾಮಥ್ರ್ಯ ರಾಹುಲ್ ಗೆ ಇಲ್ಲ ಎಂದ ವಿಶ್ವನಾಥ್, ಪ್ರಿಯಾಂಕಾ ಗಾಂಧಿಗೆ ಕೊಡುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.









