ತಿರುವನಂತಪುರಂ: ವಯನಾಡಿಗೆ ನಡೆದ ಲೋಕಸಭಾ ಚುನಾವಣಾ ಕಣದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕೇರಳ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ 70 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆಯನ್ನು ಪ್ರಿಯಾಂಕಾ ಗಾಂಧಿ ಕಾಯ್ದುಕೊಂಡಿದ್ದಾರೆ. ಹೀಗಾಗಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರು. ಆದರೆ, ಈ ಬಾರಿಯೂ ಮತದಾರ ಮಾತ್ರ ಕಾಂಗ್ರೆಸ್ ಗೆ ಜೈ ಎಂದಿರುವುದು ಸ್ಪಷ್ಟವಾಗುತ್ತಿದೆ.
ಈ ಮೂಲಕ ಪ್ರಿಯಾಂಕಾ ಗಾಂಧಿ ಚೊಚ್ಚಲ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 20,000 ಮತಗಳು ಹಾಗೂ ಬಿಜೆಪಿಯ ನವ್ಯಾ ಹರಿದಾಸ್ 11,235 ಮತಗಳೊಂದಿಗೆ ಹಿಂದೆ ಬಿದ್ದಿದ್ದಾರೆ. ಈ ಕ್ಷೇತ್ರದ ಕಣದಲ್ಲಿ ಒಟ್ಟು 16 ಜನ ಅಭ್ಯರ್ಥಿಗಳಿದ್ದಾರೆ. ಆದರೆ, ಪ್ರಿಯಾಂಕಾ ಗಾಂಧಿ ಮಾತ್ರ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.








