ಅಡುಗೆ ಅನಿಲ ಬೆಲೆ ಏರಿಕೆ : ಕೇಂದ್ರದ ವಿರುದ್ಧ ಪ್ರಿಯಾಂಕಾ ಗರಂ priyanka-gandhi
ನವದೆಹಲಿ : ದೇಶದಲ್ಲಿ ಕೊರೊನಾ ಸಂಕಷ್ಟದ ಮಧ್ಯೆಯೂ ಬೆಲೆ ಏರಿಕೆಯಾಗುತ್ತಲೇ ಇದೆ. ಕಳೆದ ಕೆಲ ದಿನಗಳ ಹಿಂದೆ ದೇಶದಲ್ಲಿ ಅಡುಗೆ ಅನಿಲ ಬೆಲೆ ಏರಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಸಾಮಾನ್ಯ ಮಹಿಳೆಯರ ನೋವಿನ ಬಗ್ಗೆ ನಾವು ಯಾವಾಗ ಮಾತಾಡುವುದು ಎಂದು ಪ್ರಶ್ನಿಸಿದ್ದಾರೆ.
महंगाई बढ़ती जा रही है।
सिलेंडर भराने के पैसे नहीं हैं।
काम-धंधे बंद हैं।ये आम महिलाओं की पीड़ा है। इनकी पीड़ा पर कब बात होगी?
महंगाई कम करो। pic.twitter.com/uWTjuOxAgI
— Priyanka Gandhi Vadra (@priyankagandhi) August 23, 2021
ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಇದು ಸಾಮಾನ್ಯ ಮಹಿಳೆಯರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ.
ಸಾಮಾನ್ಯ ಮಹಿಳೆಯರ ನೋವಿನ ಬಗ್ಗೆ ನಾವು ಯಾವಾಗ ಮಾತಾಡುವುದು ಎಂದು ಪ್ರಶ್ನಿಸಿ, ಹಣದುಬ್ಬರವನ್ನು ಇಳಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಪ್ರಿಯಾಂಕಾ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರಿಯಾಂಕಾ ಗಾಂಧಿ ಟ್ವೀಟ್ ನ ಜೊತೆಗೆ ವಿಡಿಯೋವೊಂದನ್ನು ಶೇರ್ ಮಾಡಿಕೊಂಡು ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ.