ನವದೆಹಲಿ: ಸರ್ಕಾರ ಕೂಡಲೇ ಕೊರೊನಾ ವೈರಸ್ ಸೋಂಕು ಪರೀಕ್ಷೆಯ ಪ್ರಮಾಣವನ್ನು ದೇಶದಲ್ಲಿ ಹೆಚ್ಚಿಸಬೇಕೆಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ. ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವುದರಿಂದ ಸೋಂಕಿನ ತೀವ್ರತೆ ಮತ್ತು ಅದು ಆವರಿಸುತ್ತಿರುವ ರೀತಿಯ ಬಗ್ಗೆ ಅತ್ಯಮೂಲ್ಯ ಮಾಹಿತಿಯನ್ನು ಪಡೆಯಬಹುದು ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಭಾರತದಲ್ಲಿ ಕೊರೊನಾ ಸೋಂಕಿನ ಪರೀಕ್ಷಾ ಪ್ರಮಾಣವನ್ನು ತಕ್ಷಣವೇ ಹೆಚ್ಚಿಸಬೇಕಾದ ಅನಿವಾರ್ಯ ಇದೆ. ಸೋಂಕು ಹರಡುವಿಗೆ, ಹರಡುವಿಕೆಯ ವಿಧಾನ ಮತ್ತು ಅದರ ಮೂಲಗಳನ್ನು ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಬೇಕಿದೆ’ ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ಕೇಂದ್ರದ ವಿರುದ್ಧ ಕಿಡಿಕಾರಿರುವ ಅವರು, ವೈದ್ಯಕೀಯ ಸಿಬ್ಬಂದಿಗೆ ರಕ್ಷಣಾ ಸಾಧನಗಳು ಸಿಗುತ್ತಿಲ್ಲ ಮತ್ತು ಅವರ ಸಂಬಳವನ್ನು ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.








