ಉತ್ತರಪ್ರದೇಶ ಚುನಾವಣೆ : ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸುತ್ತಿದೆ ಕಾಂಗ್ರೆಸ್
ಉತ್ತರಪ್ರದೇಶ : ಮುಂದಿನ ವರ್ಷ ( 2022) ದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ , ಬಿಎಸ್ ಪಿ ಸೇರಿದಂತೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸಿಕೊಳ್ತಿವೆ. ಬಿಜೆಪಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿ , ಭರವಸೆಗಳ ಸುರಿಗಳೆ ಗೈಯ್ಯುತ್ತಾ ಜನರ ಗಮನ ಸೆಳೆಯುತ್ತಾ ಪ್ರಚಾರ ಶುರು ಮಾಡಿದೆ.
ಎಲ್ಲಾ ಪಕ್ಷದವರು ಪರಸ್ಪರ ಆರೋಪ ಪ್ರತ್ಯಾರೋಪಗಳೂ ಸಹ ಜಾರಿಯಲ್ಲಿದೆ. ಈ ನಡುವೆ ಕಾಂಗ್ರೆಸ್ ಪ್ರಣಾಲಿಯಲ್ಲಿನ ಭರವಸೆಗಳು ಆಡಳಿತ ಪಕ್ಷ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿಗೆ ಟಕ್ಕರ್ ಕೊಡುವುದಕ್ಕೆ ಸಮರ್ಥವಾಗಿದೆ. ಹೌದು ಉಚಿತ ವೈದ್ಯಕೀಯ ಚಿಕಿತ್ಸೆಯಿಂದ ಹಿಡಿದು ಹಲವಾರು ಉತ್ತಮ ಯೋಜನೆಗಳ ಭರವಸೆಯನ್ನ ಕಾಂಗ್ರೆಸ್ ಜನರಿಗೆ ನೀಡ್ತಿದ್ದು, ಬಿಜೆಪಿಗರ ನಿದ್ದೆಗೆಡಿಸಿದೆ. ಇದೀಗ ಮಹಿಳೆಯರ ಮತಗಳನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದೆ.
ಹೌದು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗಾಗಿ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಸೋಮವಾರ ತಿಳಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ವರ್ಷಕ್ಕೆ ಉಚಿತವಾಗಿ ಮೂರು ಎಲ್‌ಪಿಜಿ ಸಿಲಿಂಡರ್ ಮತ್ತು ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.
ಹವಾಮಾನ ವೈಪರಿತ್ಯ ಹೋರಾಟದಲ್ಲಿ ಅಭಿವೃದ್ಧಿ ರಾಷ್ಟ್ರಗಳ ಧ್ವನಿಯಾಗಲು ಭಾರತ ಸಿದ್ಧ : ಮೋದಿ
ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ, ಪ್ರತಿ ದಿನದ ನಿಮ್ಮ ಜೀವನ ಹೋರಾಟದಿಂದ ತುಂಬಿದೆ. ಇದನ್ನು ಅರ್ಥಮಾಡಿಕೊಂಡಿರುವ ನಮ್ಮ ಪಕ್ಷ, ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ.
ಅಲ್ಲದೇ ಕಾಂಗ್ರೆಸ್ ಪಕ್ಷದ ಸರ್ಕಾರ ರಚನೆಯಾದ ಮೇಲೆ ಮಹಿಳೆಯರಿಗೆ ವಾರ್ಷಿಕವಾಗಿ ಮೂರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಿದೆ. ಹಾಗೆಯೇ ಮಹಿಳೆಯರು ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಕಲ್ಪಿಸಲಾಗುವುದು ಎಂದೂ ಕೂಡ ತಿಳಿಸಿದ್ಧಾರೆ.