ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನೂ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿದ್ದೇವೆ ಎದಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಆರ್.ಕೆ. ರಮೇಶ್ ಹಾಗೂ ಬೊಮ್ಮನಹಳ್ಳಿ ಕ್ಷೇತ್ರದ ಉಮಾಪತಿ ಗೌಡ ಅವರ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಈ ರಾಜ್ಯದ ಜನರು 40 ಪರ್ಸೆಂಟ್ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕಬೇಕು. ಬದಲಿಗೆ ಬಡವರ ಕಲ್ಯಾಣಕ್ಕಾಗಿ ಇರುವ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದೆರ, 2.5 ಸರ್ಕಾರಿ ಹುದ್ದೆಗಳನ್ನು ತುಂಬಿಕೊಳ್ಳುತ್ತದೆ. ಅಗತ್ಯ ವಸ್ತುಗಳನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದೆ. ಅನ್ನಭಾಗ್ಯ, ಕ್ಷೀರ ಭಾಗ್ಯ, ವಿದ್ಯಾ ಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ಹಲವು ಜನಪ್ರಿಯ ಹಾಗೂ ಉಪಯುಕ್ತ ಯೋಜನೆಗಳನ್ನು ನಿಮ್ಮ ನೆಮ್ಮದಿಗಾಗಿ ಮುಂದುವರೆಸಿಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.
ಟ್ಯಾಕ್ಸಿ, ಆಟೋ ಚಾಲಕರನ್ನು 50 ಗುಂಪುಗಳನ್ನಾಗಿ ಮಾಡಿ ಅವರಿಗೆ ಆರ್ಥಿಕ ಸಹಾಯ ಒದಗಿಸುವುದು. ರಾಜ್ಯದಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುವ ನೌಕರರಿಗೆ ಕನಿಷ್ಟ ಸಂಬಳ ಸಿಗುವಂತೆ ಯೋಜನೆ ರೂಪಿಸುವು. ಸಣ್ಣ ಪ್ರಮಾಣದ ಉದ್ಯಮಿ, ಉದ್ಯಮಗಳಿಗೆ ಸಹಕಾರ ನೀಡುವುದು. ಗುಡಿ ಕೈಗಾರಿಕೆಗಳನ್ನು, ಮಧ್ಯಮ ಸ್ಥರದ ಉದ್ಯೋಗಗಳನ್ನು ಅಭಿವೃದ್ಧಿ ಪಡಿಸುತ್ತೇವೆ. ಬೀದರ್ನಿಂದ ಚಾಮರಾಜನಗರದವರೆಗೆ, ಮೈಸೂರು, ಬಳ್ಳಾರಿ, ಹುಬ್ಬಳ್ಳಿಯಿಂದ ಐಟಿ ಕಾರಿಡರ್ ನಿರ್ಮಾಣ ಮಾಡುತ್ತೇವೆ. ಆಟೋಮೊಬೈಲ್, ಎಲೆಕ್ಟ್ರಾನಿಕ್ ಉದ್ಯಮಿ ನಿರ್ಮಣಕ್ಕೆ ಆದ್ಯತೆ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.








