ಪ್ರಿಯಾಂಕಾ ಗಾಂಧಿ ಆಪ್ತ ಕಾರ್ಯದರ್ಶಿ ಆರ್. ಎಸ್. ಎಸ್ – ಬಿಜೆಪಿ ಏಜೆಂಟ್
ನವದೆಹಲಿ : ಕಾಂಗ್ರೆಸ್ ಕಾರ್ಯಕರ್ತರು, ದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವ ಬೆನ್ನಲ್ಲೇ ಉತ್ತರಪ್ರದೇಶದಿಂದ ದೆಹಲಿಗೆ ಆಗಮಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಪ್ರಮುಖರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಅಲ್ಲದೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಆಪ್ತರನ್ನು ‘ಬಿಜೆಪಿ ಮತ್ತು ಆರ್ಎಸ್ಎಸ್’ ಏಜೆಂಟರೆಂದು ಕರೆದಿದ್ದು, ಪಕ್ಷದ ಮುಖ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಹಾಗೇ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ, ಸಹ ಉಸ್ತುವಾರಿ ಧೀರಜ್ ಗುರುರಾಜ್ ಮತ್ತು ಪ್ರಿಯಾಂಕಾ ಗಾಂಧಿ ಆಪ್ತ ಕಾರ್ಯದರ್ಶಿ ಸಂದೀಪ್ ಸಿಂಗ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಚುನಾವಣೆಯಲ್ಲಿ ಪಕ್ಷದ ಟಿಕೆಟ್ಗಳನ್ನು ಮಾರಿಕೊಂಡಿದ್ದಾರೆ ಎಂದು ದೂರಿದ್ದಾರೆ.
ಉತ್ತರಪ್ರದೇಶದ ಚುನಾವಣೆಗಾಗಿ ಪ್ರಿಯಾಂಕಾ ಗಾಂಧಿ ಸಂಪೂರ್ಣ ಸಮಯವನ್ನು ಮೀಸಲಿಟ್ಟಿದ್ದರು. ಚುನಾವಣೆಯಲ್ಲಿ ಫಲಿತಾಂಶ ನಮ್ಮ ಪರವಾಗಿ ಬಂದಿಲ್ಲ ಎಂಬುವುದೂ ನಮಗೆ ವಿಷಯವೇ ಅಲ್ಲ. ಆದರೆ, ಪಕ್ಷದಲ್ಲೇ ಇದ್ದುಕೊಂಡು ಕೆಲವರು ಪಕ್ಷಕ್ಕೆ ಹಾನಿ ಮಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳು ಚುನಾವಣೆಯನ್ನು ತಪ್ಪಾಗಿ ನಿರ್ವಹಿಸುತ್ತಿದ್ದು, ಮಾತ್ರವಲ್ಲದೇ ನಿಷ್ಠಾವಂತರನ್ನು ಪಕ್ಷ ಬಿಡುವಂತೆ ಮಾಡಿದ್ದಾರೆ ಎಂದು ಮುಖಂಡ ವೀರೇಂದ್ರ ಸಿಂಗ್ ಗುಡ್ಡು ಹೇಳಿದ್ದಾರೆ.
ಯಾವ ವ್ಯಕ್ತಿ ತನ್ನದೇ ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲವೋ, ಆ ವ್ಯಕ್ತಿಯನ್ನು ರಾಷ್ಟ್ರೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಈಗ ವ್ಯಕ್ತಿಗೆ ಉತ್ತರಪ್ರದೇಶದಲ್ಲಿ ಕಾಲಿಡಲು ಆಗುವುದಿಲ್ಲ ಎಂದು ಧೀರಜ್ ಗುರುರಾಜ್ ವಿರುದ್ಧ ವೀರೇಂದ್ರ ಸಿಂಗ್ ವಾಗ್ದಾಳಿ ನಡೆದಿದ್ದಾರೆ. ಮತ್ತೊಬ್ಬ ಕಾರ್ಯಕರ್ತ ಮಾತನಾಡಿ, ಪ್ರಿಯಾಂಕಾ ಗಾಂಧಿ ಆಪ್ತ ಕಾರ್ಯದರ್ಶಿ ಸಂದೀಪ್ ಸಿಂಗ್ ಅವರನ್ನು ‘ಬಿಜೆಪಿ ಮತ್ತು ಆರ್ಎಸ್ಎಸ್’ ಏಜೆಂಟರೆಂದು ಕರೆದಿದ್ದಾರೆ.