ಹೆಚ್ಚು ಮಕ್ಕಳಿರುವ ಪೋಷಕರಿಗೆ 1ಲಕ್ಷ ರೂ. ಬಹುಮಾನ – ಮಿಜೋರಾಂ ಸಚಿವ
ಮಿಜೋರಾಮ್ : ಒಂದು ಕಡೆ ಜನಸಂಖ್ಯೆ ನಿಯಂತ್ರಣಕ್ಕೆ ದೇಶ ನಾನಾ ಕ್ರಮಗಳನ್ನ ಕೈಗೊಳ್ತಿದೆ.. ನಾನಾ ಜಾಗೃತಿಗಳನ್ನ ಮೂಡಿಸಿ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡ್ತಿದೆ.. ಆದ್ರೆ ಈ ನಡುವೆ ಮಿಜೋರಾಂನ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಅವರು ನೀಡಿರುವ ಹೇಳಿಕೆ ಸಂಚಲ ಸೃಷ್ಟಿ ಮಾಡಿದೆ..
ಹೌದು.. ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಹೇಳಿದ್ದಾರೆ.. ಮೀಜೋರಾಂ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ಈ ಹೇಳಿಕೆ ನೀಡಿದ್ದು, ಬಹುಮಾನಕ್ಕೆ ಅರ್ಹರಾಗಬೇಕಾದರೆ ಕನಿಷ್ಠ ಎಷ್ಟು ಮಕ್ಕಳಿರಬೇಕು ಎಂದು ತಿಳಿಸಿಲ್ಲ.
ಸಣ್ಣಗಾತ್ರದ ಮಿಜೋ ಸಮುದಾಯಗಳಲ್ಲಿ ಜನಸಂಖ್ಯೆ ಹೆಚ್ಚಿಸುವ ಕಾರಣದಿಂದ ಸಚಿವ ರಾಬರ್ಟ್ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ತನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ ಒಂದು ಲಕ್ಷ ನೀಡಲಾಗುವುದು. ಅದರೊಂದಿಗೆ ಟ್ರೋಫಿ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಮಿಜೋರಾಂನ ಕೆಲವು ಜನಾಂಗಗಳಲ್ಲಿ ಜನಸಂಖ್ಯೆ ತೀರಾ ಕಡಿಮೆಯಾಗಿದೆ, ಇದೊಂದು ಗಂಭೀರ ಸಮಸ್ಯೆಯಾಗಿದೆ. ಸಣ್ಣ ಬುಡಕಟ್ಟು ಪಂಗಡಗಳ ಉಳಿವು ಮತ್ತು ಅಭಿವೃದ್ದಿಗೆ ಇದು ಮಾರಕವಾಗಿದೆ ಎಂದು ಸಚಿವ ರಾಬರ್ಟ್ ಹೇಳಿದ್ದಾರೆ.