ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಪಡೆದು ಮೊಹಮದ್ ಶಫಿ ನಾಶಿಪುಡಿ, ಮುಜಾಮಿಲ್ ಮತ್ತು ಇಲ್ತಾಜ್ಗೆ ಜಾಮೀನು ನೀಡಲಾಗಿದೆ. ಆರೋಪಿಳು ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವಿನ ಬಳಿಕ ಆರೋಪಿಗಳು ಘೋಷಣೆ ಕೂಗಿದ್ದರು. ಎಫ್ಎಸ್ಎಲ್ ವರದಿಯಲ್ಲಿ ಘೋಷಣೆ ಕೂಗಿದ್ದು ಸಾಬೀತಾಗಿತ್ತು. ಭಾರೀ ವಿವಾದದ ನಂತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಉಳಿಸಲು ಪ್ರಯತ್ನ ನಡೆದಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಆರೋಪಿಗಳ ಮೊಬೈಲ್ನಲ್ಲಿದ್ದ ಡಾಟಾವನ್ನ ಕೂಡಲೇ ಡಿಲೀಟ್ ಮಾಡಲಾಗಿತ್ತು. ಕಾಂಗ್ರೆಸ್ ನಾಯಕರ ಜೊತೆಗಿದ್ದ ಫೋಟೋ, ವಿಡಿಯೋಗಳು, ಸಾಮಾಜಿಕ ಜಾಲತಾಣದ ಪ್ರೊಫೈಲ್ ಸೇರಿ ಎಲ್ಲ ಡಿಲೀಟ್ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. 2 ಸಲ ಶತ್ರು ರಾಷ್ಟ್ರದ ಪರ ಘೋಷಣೆ ಕೂಗಲಾಗಿದೆ ಎಂದು FSL ರಿಪೋರ್ಟ್ನಲ್ಲಿ ಸ್ಫೋಟಕ ಅಂಶ ಬಹಿರಂಗಗೊಂಡಿತ್ತು.