ಬೆಂಗಳೂರು: ವಿಧಾನಸೌಧದಲ್ಲಿ ಜರುಗಿದ್ದ ರಾಜ್ಯಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್ ನ ನಾಸಿರ್ ಹುಸೇನ್ ಬೆಂಬಲಿಗರು ಪಾಕ್ ಪರ ಘೋಷಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.
ನಾಸೀರ್ ಹುಸೇನ್ ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅವರ ಪಕ್ಕದಲ್ಲಿದ್ದ ಯುವಕ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಈ ಕುರಿತು ಹಲವು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಅಲ್ಲದೇ, ನಾಳೆ ಅಂದರೆ ಫೆ. 28ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಾಗೂ ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಹಾಕಲು ಬಿಜೆಪಿ ಕರೆ ನೀಡಿದೆ.
ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ, ‘ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮಾನ, ಮರ್ಯಾದೆ ನಾಚಿಕೆ ಇಲ್ಲ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಕೂಡಲೇ ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.