ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಗೆದ್ದ ಹಿನ್ನೆಲೆಯಲ್ಲಿ ಪಾಕ್ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿರುವ ಘಟನೆ ವಿಧಾನಸಭೆಯಲ್ಲಿ ನಡೆದಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ನಂತರ ಕಾಂಗ್ರೆಸ್ ನ ನಾಸೀರ್ ಹುಸೇನ್ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ್ದಾರೆ. ನಾಸೀರ್ ಹುಸೇನ್ 47 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ್ದಾರೆ.
ಈ ಘೋಷಣೆ ಕೂಗಿರುವ ಕುರಿತು ನನಗೆ ಗೊತ್ತಿಲ್ಲ ಎಂದು ನಾಸೀರ್ ಹುಸೇನ್ ಹೇಳಿದ್ದಾರೆ.