ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನಾ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾಳೆ.
ಹಿಂದೂ-ಮುಸ್ಲಿಂ-ಸಿಖ್- ಈಸಾಯಿ ಫೆಡರೇಷನ್ ಬೆಂಗಳೂರು ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಸಮಾವೇಶದಲ್ಲಿ ಈ ವಿವಾದ ಸೃಷ್ಟಿಯಾಗಿದೆ.
ಸಂಸದ ಒವೈಸಿ ಸಹಿತ ಹಲವಾರು ಸಿಎಎ ವಿರೋಧಿ ಹೋರಾಟಗಾರರು ಪ್ರತಿಭಟನಾ ಸಮಾವೇಶದಲ್ಲಿ ಹಾಜರಿದ್ದರು.

ಪ್ರತಿಭಟನಾ ವೇದಿಕೆಯಲ್ಲಿ ಅಮೂಲ್ಯ ಲಿಯೋನ್ ಎಂಬಾಕೆ ಮೈಕ್ ಕೈಗೆತ್ತಿಕೊಂಡು ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾಳೆ.
ಆ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಆಯೋಜಕರು ಅಮೂಲ್ಯ ಅವರನ್ನು ತಡೆಯಲು ಪ್ರಯತ್ನಿಸಿದರೂ ಸಹ ಆಕೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾಳೆ.
ಸ್ಥಳದಲ್ಲಿದ್ದ ಪೊಲೀಸರು ಆಕೆಯನ್ನು ವೇದಿಕೆಯಲ್ಲೇ ಬಂಧಿಸಿ ವಶಕ್ಕೆ ಪಡೆದಿದ್ದಾರೆ.
ಈ ಹಿಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೋಸ್ಟ್‌ಕಾರ್ಡ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನು ವಂದೇ ಮಾತರಂ ಹಾಡಿ ಎಂದು ಅಮೂಲ್ಯ ಲಿಯೋನ, ಕವಿತಾ ರೆಡ್ಡಿ ಮತ್ತು ನಜ್ಮಾ ನಜೀರ್, ಕಾಡಿಸಿ ಸುದ್ದಿಯಾಗಿದ್ದರು.








