ಸೋಶಿಯಲ್ ಮೀಡಿಯಾಗಳಲ್ಲಿ ತ್ರಿವರ್ಣ ಧ್ವಜ ಪ್ರೊಪೈಲ್ ಚಿತ್ರವಾಗಿರಲಿ – ಪ್ರಧಾನಿ ಮೋದಿ ಕರೆ
ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವಾಗಿ ಇರಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ರೆಡಿಯೋ ಕಾರ್ಯಕ್ರಮದ ಮೂಲಕ ಕರೆ ನೀಡಿದ್ದಾರೆ.
ದೇಶದ ಎಲ್ಲಾ ಜನರು ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ, ಸೋಶಿಯಲ್ ಮೀಡಿಯಾ ಪ್ರೊಫೈಲ್ಗಳಲ್ಲಿ ತ್ರಿವರ್ಣ ಧ್ವಜವನ್ನು ಡಿಪಿ (ಡಿಸ್ಪ್ಲೇ ಪಿಕ್ಚರ್) ಆಗಿ ಇರಿಸಲು ಪ್ರಧಾನಿ ಸೂಚಿಸಿದ್ದಾರೆ. ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗ’ದ ಅಂಗವಾಗಿ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಮೋದಿ ಕರೆ ನೀಡಿದರು.
Under the Azadi Ka Amrit Mahotsav, from the 13th to the 15th of August, a special movement – 'Har Ghar Tiranga' is being organised.
Let us further this movement by hoisting the National Flag at our homes. #MannKiBaat pic.twitter.com/NikI0j7C6Z
— PMO India (@PMOIndia) July 31, 2022
ಆಜಾದಿ ಕಾ ಅಮೃತ್ ಮಹೋತ್ಸವ’ದ ಅಂಗವಾಗಿ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವದ 75 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ಈ ಘೋಷಣೆ ಮಾಡಿದ್ದಾರೆ. ರಾಷ್ಟ್ರಧ್ವಜದ ಸೃಷ್ಟಿಕರ್ತ ಪಿಂಗಲಿ ವೆಂಕಯ್ಯ ಅವರ ಜನ್ಮದಿನದ ಸ್ಮರಣಾರ್ಥ ಆಗಸ್ಟ್ 2 ರಂದು ಸಾಮಾಜಿಕ ಮಾಧ್ಯಮ ಪ್ರೊಫೈಲ್ ಪಿಕ್ಚರ್ ಡ್ರೈವ್ ಅನ್ನು ಪ್ರಾರಂಭಿಸಲಾಗುವುದು ಎಂದು ಪ್ರಧಾನಿ ಹೇಳಿದರು.








