ದೇಶದಾದ್ಯಂತ ಮದ್ಯ ನಿಷೇಧಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಒಲವು ತೋರಿದ್ದಾರೆ. ಇತ್ತೀಚೆಗೆ ಬಿಹಾರದಲ್ಲಿ ಮದ್ಯ ನಿಷೇದ ಮಾಡಿದ್ದನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಆದರೆ ಪಕ್ಕದ ರಾಜ್ಯಗಳಲ್ಲಿ ಮದ್ಯ ನಿಷೇಧವಾಗಿಲ್ಲ. ಆದ್ದರಿಂದ ನಮ್ಮ ರಾಜ್ಯದ ಜನ ಅಲ್ಲಿಗೆ ಹೋಗಿ ಕುಡಿದು ಬರುತ್ತಿದ್ದಾರೆ. ಇದರಿಂದ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಿವೆ. ಕೇಂದ್ರ ಸರ್ಕಾರ ದೇಶದಾದ್ಯಂತ ಮದ್ಯ ನಿಷೇಧ ಮಾಡಬೇಕು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ.








