Prohibition in Kodagu | ಕೊಡಗಿನಲ್ಲಿ ನಾಳೆಯಿಂದ ನಿಷೇಧಾಜ್ಞೆ
ನಾಳೆಯಿಂದ ಶನಿವಾರದವರೆಗೆ ನಿಷೇಧಾಜ್ಞೆ
ಕೊಡಗಿನಲ್ಲಿ ಮದ್ಯ ಮಾರಾಟ ನಿಷೇಧ
ಸಿದ್ದು ಕಾರಿಗೆ ಮೊಟ್ಟೆ ಎಸೆದ ಪ್ರಕರಣ
ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಮಡಿಕೇರಿ : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ.
ಬಿಜೆಪಿ ಹಾಗೂ ಕಾಂಗ್ರೆಸ್ ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ಕೊಡಗಿನಲ್ಲಿ ಎರಡೂ ಪಕ್ಷದವರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ನಾಳೆಯಿಂದ ಆಗಸ್ಟ್ 27 ರವರೆಗೆ ಕೊಡಗಿನಲ್ಲಿ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ. ಈ ನಾಲ್ಕು ದಿನಗಳ ಕಾಲ ಕೊಡಗಿನಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಕೊಡಗಿಗೆ ಸಿದ್ದರಾಮಯ್ಯ ಭೇಟಿ ನೀಡಿದಾಗ ಅವರ ಕಾರಿಗೆ ಮೊಟ್ಟೆ ಹೊಡೆಯಲಾಗಿತ್ತು.
ಇದನ್ನ ಖಂಡಿಸಿ ಘಟನೆಗೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ ಇದೇ ಆಗಸ್ಟ್ 26 ರಂದು ಮಡಿಕೇರಿ ಚಲೋವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಎಸ್ ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಪಕ್ಷ ನಿರ್ಧಾರ ಮಾಡಿತ್ತು.
ಇತ್ತ ಇದಕ್ಕೆ ಕೌಂಟರ್ ಮಾಡಲು ಬಿಜೆಪಿ ಮುಂದಾಗಿದ್ದು, ಜನ ಜಾಗೃತಿ ಸಮಾವೇಶ ಮಾಡಲು ತಯಾರಿ ನಡೆಸಿದೆ.
ಕೊಡಗು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕರಪತ್ರವನ್ನು ಹಂಚುವಂತೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಕರೆ ನೀಡಿದ್ದರು.
ಈ ಎಲ್ಲಾ ರಾಜಕೀಯದಾಟದ ನಡುವೆ ಕೊಡಗು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.
ನಗರದಲ್ಲಿ ನಾಲ್ಕು ದಿನಗಳ ಕಾಲ 144 ಸೆಕ್ಷನ್ ಹಾಕಲಾಗಿದ್ದು, ಸಮಾವೇಶ ಹಾಗೂ ಪ್ರತಿಭಟನೆ ಮಾಡುವುದನ್ನ ನಿರ್ಬಂಧ ಮಾಡಲಾಗಿದೆ.
ನಾಳೆಯಿಂದ ಆಗಸ್ಟ್ 27 ಸಂಜೆ ಆರು ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಸತೀಶ್ ಖಡಕ್ ಆದೇಶ ಕೊಟ್ಟಿದ್ದಾರೆ.