ಕಲಬುರಗಿ: ಯಡ್ರಾಮಿ ತಾಲೂಕಿನಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ (Stone Pelting) ನಡೆಸಿರುವ ಘಟನೆ ನಡೆದಿದೆ.
ನಗರದ ಬಂಜಾರಾ ಸಮುದಾಯದ ಭವನದಿಂದ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಆಗಮಿಸಿದ ಪ್ರತಿಭಟನಾಕಾರರು, ವೇಳೆಯಲ್ಲಿ ಇಬ್ಬರು ಕಿಡಿಗೇಡಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿದ್ದ ಅಂಗಡಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಅವರದ್ದೆ ಕಾರಿನ ಮೇಲೆ ಕೂಡ ಕಲ್ಲು ತೂರಾಟ ಮಾಡಲಾಗಿದ್ದು, ಕಾರಿನ ಗಾಜು ಕೂಡ ಪುಡಿಪುಡಿಯಾಗಿದೆ.