ಎಂಇಎಸ್ ಸಂಘಟನೆ ನಿಷೇಧಕ್ಕೆ ಕೆ.ಆರ್.ಪೇಟೆಯಲ್ಲಿ ಪ್ರತಿಭಟನೆ MES saaksha tv
ಮಂಡ್ಯ : ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ವಿರೋಧಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದರು.
ಬೆಳಗಾವಿಯ ಪೀರನವಾಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರಸೇನಾನಿ ಸಂಗೊಳ್ಳಿರಾಯಣ್ಣ ಅವರ ಪುತ್ಥಳಿಯನ್ನು ಒಡೆದುಹಾಕಿ ವಿಕೃತಿ ಮೆರೆದಿರುವ ಎಂಇಎಸ್ ಪುಂಡರಿಗೆ ಉಗ್ರ ಶಿಕ್ಷೆಯನ್ನು ವಿಧಿಸಿ ಗಡೀಪಾರು ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇನ್ನು ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಕನ್ನಡಪರ ಸಂಘಟನೆಗಳು, ದಲಿತ ಹಾಗೂ ರೈತ ಸಂಘಟನೆಗಳು, ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಹಾಗೂ ತಾಲ್ಲೂಕು ಕುರುಬ ಸಮಾಜದ ಮುಖಂಡರು ಕೆ.ಆರ್.ಪೇಟೆ ಪಟ್ಟಣದಲ್ಲಿ ರಸ್ತೆ ತಡೆ ನಡೆಸಿದರು. ಬಳಿಕ ತಹಶೀಲ್ದಾರ್ ಎಂ.ಶಿವಮೂರ್ತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.









