ಶಿವಮೊಗ್ಗ: ಮಳೆ ಹಾನಿ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಕಪ್ಪು ಪಟ್ಟಿ ಪ್ರದರ್ಶನ ಮಾಡಿ ಬಿಜೆಪಿ (BJP) ಯುವ ಮೋರ್ಚಾ ಕಾರ್ಯಕರ್ತರು (Activists) ಪ್ರತಿಭಟನೆ ನಡೆಸಿದ್ದಾರೆ.
ಈ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ಸಭೆ ಆರಂಭವಾಗುತ್ತಿದ್ದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶಿಸಿದ್ದಾರೆ. ಆನಂತರ ಸಭೆಯಲ್ಲಿ ಕರಪತ್ರಗಳನ್ನು ಎಸೆದಿದ್ದಾರೆ. ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ ಸಚಿವರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ವೀರ ಸಾವರ್ಕರ್ (Veer Savarkar) ಅವರ ಪಠ್ಯವನ್ನು ಶಾಲಾ ಪುಸ್ತಕಗಳಲ್ಲಿ ಕೈ ಬಿಟ್ಟಿರುವ ಹಿನ್ನೆಲೆಯಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.