ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ವಿದ್ಯಾರ್ಥಿಗಳು ಮತ್ತೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟ ಘರ್ಷಣೆಗೆ ತಿರುಗಿ ಮೂವರು ಸಾವನ್ನಪ್ಪಿದ್ದಾರೆ.
ಆಸ್ಪತ್ರೆಯ (Hospital) ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಸಾವಪ್ಪಿದ್ದಕ್ಕೆ ವಿದ್ಯಾರ್ಥಿಗಳು ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಾಹನಗಳು, ಲ್ಯಾಬ್ ಗಳನ್ನು ಧ್ವಂಸ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಸುಮಾರು 35 ಕೋಟಿ ರೂ. ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಡೆಂಗ್ಯೂನಿಂದ ಬಳಲುತ್ತಿದ್ದ 12ನೇ ತರಗತಿಯ ವಿದ್ಯಾರ್ಥಿ ಅಭಿಜಿತ್ ಸಾವನ್ನಪ್ಪಿದ್ದ. ಹೀಗಾಗಿ ಆತನ ಸ್ನೇಹಿತರಾದ ಸಿಯಾಮ್ ಮತ್ತು ಅಫ್ತಾಬ್ ಅವರು ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ನೀಡದ್ದಕ್ಕೆ ಅಭಿಜಿತ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಪ್ರಕಟಿಸಿದ್ದರು. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಲವು ವಿದ್ಯಾರ್ಥಿಗಳು ಆಸ್ಪತ್ರೆಯ ಮುಂದೆ ಬಂದು ಪ್ರತಿಭಟನೆ ನಡೆಸಿದ್ದರು.
ಈ ಪ್ರತಿಭಟನೆ ವಿಕೋಪಕ್ಕೆ ತಿರುಗಿ ವಿದ್ಯಾರ್ಥಿಗಳು ದಾಂಧಲೆ ಮಾಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಢಾಕಾದ ಕಾಲೇಜುಗಳು, ಹಾಸ್ಟೆಲ್‌ಗಳು ಮತ್ತು ಪೂಜಾ ಸ್ಥಳಗಳ ಸುತ್ತಲೂ ಈಗ ಸೇನೆಯನ್ನು ನಿಯೋಜಿಸಲಾಗಿದೆ.