ಎಂಇಎಸ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಸನದಲ್ಲಿ ಕರವೇ ಪ್ರೊಟೆಸ್ಟ್ Hassan saaksha tv
ಹಾಸನ : ನಾಡದ್ರೋಹಿ ಎಂ ಇಎಸ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಸನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಹೊಳೆನರಸೀಪುರ ಪಟ್ಟಣದಲ್ಲಿ ಟಿ.ಎ.ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರು ಪ್ರತಿಭಟಿಸಿದ್ದು, ಕನ್ನಡ ಧ್ವಜ ಹಾಗೂ ಸಂಗೊಳ್ಳಿ ರಾಯಣ್ಣ ಅವರಿಗೆ ಜೈ ಎಂದು ಘೋಷಣೆ ಕೂಗಿದರು.
ಹಾಗೇ ಕನ್ನಡ ಬಾವುಟ ಸುಟ್ಟು ಹಾಕಿ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ್ದಾರೆ. ಅವರನ್ನು ಕೂಡಲೇ ಬಂಧಿಸಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಎಂಇಎಸ್ ಮತ್ತು ಶಿವಸೇನಾ ಪುಂಡಾಟಿಕೆಯನ್ನು ಖಂಡಿಸಿ ರಾಜ್ಯದಾದ್ಯಂತ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.









