ಮೈಸೂರು : ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಆಹ್ವಾನಿಸಿ ಹೈನುಗಾರಿಕೆ, ಕುಕ್ಕುಟೋದ್ಯಮ ಮುಕ್ತ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವುದನ್ನು ವಿರೋಧಿಸಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಕರ್ನಾಟಕ ಪ್ರಾಂತ ರೈತ ಸಂಘದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗಿದೆ. “”ಈ ಮುಕ್ತ ವ್ಯಾಪಾರ ಒಪ್ಪಂದ ಜಾರಿಯಾದರೆ ಭಾರತಕ್ಕೆ ವಾರ್ಷಿಕ ಅಂದಾಜು 42,000 ಕೋಟಿ ರೂ, ಗಳ ಹೈನು ಉತ್ಪನ್ನಗಳು, ಕೋಳಿ ಉತ್ಪನ್ನಗಳು, ಮತ್ತಿತರ ಕೃಷಿ ಉತ್ಪನ್ನಗಳ ವಸ್ತುಗಳು ಆಮದಾಗಲಿದೆ”. ಸುಮಾರು ನೂರು ಮಿಲಿಯನ್ ಹೈನುಗಾರಿಕಾ ರೈತರು, ಅದರಲ್ಲೂ ಮಹಿಳೆ ಮತ್ತು ಬಡ ರೈತರು ಸರ್ಕಾರದ ನಡೆಯಿಂದ ತೊಂದರೆಗೆ ಒಳಗಾಗುತ್ತಾರೆ. ಹೈನುಗಾರಿಕೆ ಮತ್ತು ಕುಕ್ಕುಟ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕರು ಕೂಡ ತಮ್ಮ ಜೀವನೋಪಾಯದಿಂದ ವಂಚಿತರಾಗುತ್ತಾರೆ ಎಂದು ಪ್ರತಿಭಟನಾಕಾರರು ಕೇಂದ್ರ ವಿರುದ್ಧ ಕಿಡಿಕಾರಿದ್ದಾರೆ.
ಮೌಲಾನಾ ಸಾಜಿದ್ ರಶೀದಿಗೆ ಕಪಾಳಮೋಕ್ಷ:ಸಂಸದೆ ಡಿಂಪಲ್ ಯಾದವ್ ಬೆನ್ನಿನ ಕುರಿತ ಅಶ್ಲೀಲ ಹೇಳಿಕೆಗೆ ತೀವ್ರ ಆಕ್ರೋಶ
ಲಖನೌ: ಸಮಾಜವಾದಿ ಪಕ್ಷದ (SP) ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ, ಮೈನ್‌ಪುರಿ ಸಂಸದೆ ಡಿಂಪಲ್ ಯಾದವ್ ಅವರ ಬಗ್ಗೆ ಅಸಭ್ಯ ಮತ್ತು ಅಶ್ಲೀಲ ಹೇಳಿಕೆ ನೀಡಿದ್ದ...