ಮೈಸೂರು : ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರ ಕೈ ಬಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಇಂದು ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರಯ ಸರ್ಕಾರ ತಿದ್ದುಪಡಿ ತೀರ್ಮಾನ ಹಿಂಪಡೆಯುವಂತೆ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನಿಸಿರುವುದು ಆತಂಕಕಾರಿಯಾಗಿದೆ. ಉಳುವವರಿಂದ ಭೂಮಿ ಕಿತ್ತುಕೊಂಡು ಉಳ್ಳವರನ್ನು ಭೂಮಿಯ ಒಡೆಯರನ್ನಾಗಿ ಮಾಡಲು ಈ ಕಾಯ್ದೆ ಜಾರಿಗೊಳಿಸಲು ಮುಂದಾಗಿದ್ದಾರೆ. ಈ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ನಮ್ಮ ವಿರೋಧವಿದೆ. ರೈತ ವಿರೋಧಿ ಜನ ವಿರೋಧಿ ತೀರ್ಮಾನವನ್ನು ಈ ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿದರು.








